", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1750070589-WhatsApp-Image-2025-06-16-at-4.11.38-PM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SantoshHassan" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ, ಜೂನ್ 16: ನಗರದ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಅಪರಿಚಿತ ಕಿಡಿಗೇಡಿಯೊಬ್ಬ ಇಮೇಲ್ ಮೂಲಕ ಬೆದರಿಕೆ ಹಾಕಿ...Read more" } ", "keywords": "Hassan news, bomb threat, private educational institution, Vidya Soudha Public School and College, KIADB growth centre, police investigation, hoax threat.", "url": "https://dashboard.publicnext.com/node" } ಹಾಸನ: ಖಾಸಗಿ ಶಿಕ್ಷಣ ಸಂಸ್ಥೆಗೆ ಬಾಂಬ್ ಬೆದರಿಕೆ…!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಖಾಸಗಿ ಶಿಕ್ಷಣ ಸಂಸ್ಥೆಗೆ ಬಾಂಬ್ ಬೆದರಿಕೆ…!

ಹಾಸನ, ಜೂನ್ 16: ನಗರದ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಹಾಕಿ ಸ್ಫೋಟಿಸುವುದಾಗಿ ಅಪರಿಚಿತ ಕಿಡಿಗೇಡಿಯೊಬ್ಬ ಇಮೇಲ್ ಮೂಲಕ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ವಿಜಯನಗರ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಕೆ.ಆರ್.ಪುರಂನಲ್ಲಿರುವ ವಿದ್ಯಾಸೌಧ ಪಬ್ಲಿಕ್ ಸ್ಕೂಲ್, ವಿದ್ಯಾಸೌಧ ಕಿಡ್ಸ್ ಮತ್ತು ವಿದ್ಯಾಸೌಧ ಕಾಲೇಜ್‌ಗೆ ಈ ಬೆದರಿಕೆ ಇಮೇಲ್ ಬಂದಿದೆ.

ಮಂಜೇಗೌಡ ಎಂಬುವವರ ಮಾಲೀಕತ್ವದ ಈ ಶಿಕ್ಷಣ ಸಂಸ್ಥೆಗಳಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಶಾಲಾ ಕಟ್ಟಡವನ್ನು ಸ್ಫೋಟಿಸುವುದಾಗಿ ಇಮೇಲ್‌ನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಹಾಸನ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಡರಾತ್ರಿ ಶಾಲಾ ಕಟ್ಟಡಗಳಿಗೆ ತೆರಳಿ ತೀವ್ರ ಪರಿಶೀಲನೆ ನಡೆಸಿದ್ದಾರೆ. ಈವರೆಗೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲವಾದರೂ, ತನಿಖೆ ಮುಂದುವರಿದಿದೆ. ಅಪರಿಚಿತನಿಂದ ಬಂದ ಈ ಬೆದರಿಕೆ ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಘಟನೆಯಿಂದ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಸಿಬ್ಬಂದಿಯಲ್ಲಿ ಆತಂಕ ಮೂಡಿದೆ

Edited By : Shivu K
PublicNext

PublicNext

16/06/2025 04:13 pm

Cinque Terre

24.3 K

Cinque Terre

0