", "articleSection": "Politics,Education", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/402829_1750162471_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Veeresh naik ballari" }, "editor": { "@type": "Person", "name": "9743508235" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಳ್ಳಾರಿ : ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂ...Read more" } ", "keywords": "Minister Madhu Bangarappa's mid-day meal initiative", "url": "https://dashboard.publicnext.com/node" } ಬಳ್ಳಾರಿ : ಮಕ್ಕಳ ಜೊತೆ ಬಿಸಿಯೂಟ ಸವಿದ ಸಚಿವ ಮಧು ಬಂಗಾರಪ್ಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ : ಮಕ್ಕಳ ಜೊತೆ ಬಿಸಿಯೂಟ ಸವಿದ ಸಚಿವ ಮಧು ಬಂಗಾರಪ್ಪ

ಬಳ್ಳಾರಿ : ನಗರದ ಪಟೇಲ್ ನಗರ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಜತೆ ಕುಳಿತು ಮಧ್ಯಾಹ್ನದ ಬಿಸಿಯೂಟ ಸವಿದರು. ಊಟದಲ್ಲಿ ಅನ್ನ, ಸಾಂಬಾರು ಜತೆಗೆ ಉಪ್ಪಿನಕಾಯಿ ಮತ್ತು ಮೊಟ್ಟೆ ನೀಡಲಾಗಿತ್ತು. ಇದೇ ವೇಳೆ ಊಟದ ರುಚಿಯ ಬಗ್ಗೆ ಮಕ್ಕಳನ್ನು ಕೇಳಿದರು. ಇದಕ್ಕೂ ಮುನ್ನ 7ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಶಾಲೆಯ ಶೈಕ್ಷಣಿಕ ಗುಣಮಟ್ಟ, ಆರೋಗ್ಯ ಹಾಗೂ ಶಾಲೆಯಲ್ಲಿ ದೊರೆಯುತ್ತಿರುವ ಸೌಕರ್ಯಗಳ ಕುರಿತು ಅಭಿಪ್ರಾಯ ಪಡೆದುಕೊಂಡರು.

ಮಕ್ಕಳು ದಿನಾಲೂ ಶಾಲೆಗೆ ಬರಬೇಕು. ಯಾವುದೇ ಕಾರಣಕ್ಕೂ ಶಾಲೆಗೆ ತಪ್ಪಿಸಬಾರದು. ಮನೆಯಲ್ಲಿ ಶಾಲೆಗೆ ಹೋಗಲು ಅಡ್ಡಿಪಡಿಸಿದರೆ, ನಾನು ತಪ್ಪದೇ ಶಾಲೆಗೆ ಹೋಗುತ್ತೇನೆ ಎಂದು ಹೇಳಬೇಕು. ಶಾಲೆಯಲ್ಲಿ ದೊರೆಯುವ ಶಿಕ್ಷಣ ಪಡೆದು, ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸಾಧಕರ ಪುಸ್ತಕಗಳನ್ನು ಓದಿ ಪ್ರೇರಣೆ ತೆಗೆದುಕೊಳ್ಳಬೇಕು. ಮಕ್ಕಳ ಭವಿಷ್ಯದ ಮೇಲೆ ಪೋಷಕರು ಸಾಕಷ್ಟು ಕನಸು ಕಂಡಿರುತ್ತಾರೆ. ಪೋಷಕರ ಕನಸು ನನಸಾಗಿಸಬೇಕು. ಓದಿನ ಜತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಉನ್ನತ ಶಿಕ್ಷಣ ಪಡೆದುಕೊಂಡು ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Edited By : PublicNext Desk
PublicNext

PublicNext

17/06/2025 05:44 pm

Cinque Terre

19.79 K

Cinque Terre

0