", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/387839-1750263149-Untitled-design---2025-06-18T214609.289.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೊಪ್ಪಳ: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸುರೇಶ್ ಬಿ. ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣ...Read more" } ", "keywords": "Koppal district, Suresh B Itnala, Deputy Commissioner, CEO, charge assumption, administrative officer. ", "url": "https://dashboard.publicnext.com/node" }
ಕೊಪ್ಪಳ: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸುರೇಶ್ ಬಿ. ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್‌ನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ್ ನೇಗಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರ ಹಸ್ತಾಂತರಿಸಿ ಹೊಸ ಜಿಲ್ಲಾಧಿಕಾರಿ ಇಟ್ನಾಳರಿಗೆ ಶುಭ ಹಾರೈಸಿದರು. ಸುರೇಶ್ ಬಿ. ಇಟ್ನಾಳ ಅವರು ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಈ ಮೊದಲು ಕೊಪ್ಪಳದಲ್ಲಿಯೇ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಜಿಲ್ಲಾ ಪಂಚಾಯತ್ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ವರ್ಣಿತ್ ನೇಗಿ ಅವರು 2019ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದು, ಮೂಲತಃ ಛತ್ತೀಸಗಡ ರಾಜ್ಯದವರು. ತಮ್ಮ ಪ್ರೋಬೇಷನ್ ಅವಧಿಯನ್ನು ಕೊಪ್ಪಳ ಜಿಲ್ಲೆಯಲ್ಲಿ ಮುಗಿಸಿದ ಅವರು, ನಂತರ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆ (ATI)ಯಲ್ಲಿ ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಇದಲ್ಲದೆ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲಾ ಪಂಚಾಯತ್‌ಗಳಲ್ಲಿ ಸಿಇಒ ಆಗಿ ಸೇವೆ ಸಲ್ಲಿಸಿದ ನಂತರ, ಅವರು ಕೆಎಚ್‌ಡಿಸಿ ಹುಬ್ಬಳ್ಳಿಯ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಈಗ ಕೊಪ್ಪಳ ಜಿಲ್ಲೆಗೆ ಸಿಇಒ ಆಗಿ ಹಾಜರಾಗಿದ್ದಾರೆ. ಅಧಿಕಾರ ಸ್ವೀಕಾರ ಸಂದರ್ಭ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
18/06/2025 09:42 pm