", "articleSection": "Crime,Law and Order,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1750429602-Youtube-HD.03_05_39_14.Still2396.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಂಕರನಾರಾಯಣ : ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪ್ರಕರಣದ ತನಿಖೆಯನ್ನು ಪೊಲೀಸರು...Read more" } ", "keywords": "Udupi marital dispute murder, wife mobile addiction murder Udupi, husband's suspicion leads to murder Udupi, couple's quarrel ends in murder, Udupi domestic murder, mobile addiction crime Udupi, suspicious husband murder Udupi, Udupi crime news, marital conflict murder Karnataka, Udupi family tragedy", "url": "https://dashboard.publicnext.com/node" }
ಶಂಕರನಾರಾಯಣ : ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಪತಿಯೊಬ್ಬ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈಗಾಗಲೇ ಆರೋಪಿ ಪತಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ (42) ಹಾಗೂ ರೇಖಾಳಿಗೆ (27) 8 ವರ್ಷಗಳ ಹಿಂದೆ ಮದುವೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದರು. ಪತಿ ಪತ್ನಿ ಮಧ್ಯೆ ಹೊಂದಾಣಿಕೆ ಇರಲಿಲ್ಲ. ನಿತ್ಯ ಕುಡಿದು ಬರುತ್ತಿದ್ದ ಗಂಡ, ಪತ್ನಿಯ ಬಗ್ಗೆ ಸಂಶಯಪಡುತ್ತಿದ್ದ. ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ.
ಎಂದಿನಂತೆ ಗುರುವಾರ ತಡರಾತ್ರಿ ಕುಡಿದು ಬಂದ ಪತಿ ಗಣೇಶ್, ಪತ್ನಿ ರೇಖಾಳೊಂದಿಗೆ ಜಗಳ ಮಾಡಿದ್ದಾನೆ. ಇದು ವಿಕೋಪಕ್ಕೆ ಹೋಗಿ ಪತ್ನಿಗೆ ಕತ್ತಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ವಿಷಯ ತಿಳಿದು ಪೊಲೀಸರು ರಾತ್ರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ಕೈಗೊಂಡಿದ್ದಾರೆ.
ಸದ್ಯ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
Kshetra Samachara
20/06/2025 07:56 pm