", "articleSection": "Crime,Accident,News,LadiesCorner", "image": { "@type": "ImageObject", "url": "https://prod.cdn.publicnext.com/s3fs-public/421698-1750489641-Youtube-HD.03_12_19_19.Still2400~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸದಸ್ಯೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪತಿಯೇ ಪತ್ನ...Read more" } ", "keywords": "Chitradurga Gram Panchayat member death, GP member murder suspicion, husband suspected in GP member death, Chitradurga GP member parents suspect husband, Panchayat member mysterious death, Chitradurga murder case suspicion, husband as killer parents' doubt, Chitradurga political murder suspicion, GP member death investigation, parents blame husband Chitradurga", "url": "https://dashboard.publicnext.com/node" }
ಚಿತ್ರದುರ್ಗ: ಗ್ರಾಮ ಪಂಚಾಯಿತಿ ಸದಸ್ಯೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪತಿಯೇ ಪತ್ನಿಗೆ ಟ್ರಾಕ್ಟರ್ ನಿಂದ ಗುದ್ದಿ ಕೊಲೆ ಮಾಡಿರುವ ಅನುಮಾನ ಮೂಡಿದೆ. ಪತ್ನಿ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿದ್ದಾನೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು HD ಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ 4 ಗಂಟೆ ವೇಳೆಗೆ ಪ್ರಕರಣ ಬೆಳಕಿಗೆ ಬಂದಿದೆ.
ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಶಿಲ್ಪಾ(40) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಶಿಲ್ಪಾ ಸಾವಿನಲ್ಲಿ ಗಂಡ ಪ್ರಕಾಶ್ ಕೈವಾಡವಿದೆ ಎಂದು ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ. ಜಮೀನಿಗೆ ಕರೆದೊಯ್ದು ಟ್ರಾಕ್ಟರ್ ನಿಂದ ಗುದ್ದಿ ಕೊಲೆ ಮಾಡಿದ್ದು, ಬಳಿಕ ಟ್ರಾಕ್ಟರ್ ಅಪಘಾತ ಎಂದು ಕಥೆ ಕಟ್ಟಿದ್ದಾಗಿ ಮೃತ ಶಿಲ್ಪಾ ಸಂಬಂಧಿಕರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
21/06/2025 12:37 pm