", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/28305320250624024227filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂ...Read more" } ", "keywords": "Kolar, ganja sale, accused arrested, drug bust, police action, narcotics arrest ", "url": "https://dashboard.publicnext.com/node" } ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿಗಳ ಮೌಲ್ಯದ 2 ಕೆಜಿ 100 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೆಮೆಲ್‌ನಗರ ಪೊಲೀಸ್ ಠಾಣಾ ಸರಹದ್ದು, ಅಜ್ಜಪ್ಪನಹಳ್ಳಿ ಗ್ರಾಮದ ಮುಖ್ಯ ರಸ್ತೆಯ ಮೋರಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ, ಸೈಬರ್ ಅಪರಾಧ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಲಕ್ಷ್ಮಿನಾರಾಯಣ ಮತ್ತು ಸಿಬ್ಬಂದಿ ಕೂಡಲೇ ದಾಳಿ ನಡೆಸಿ, ಬಂಗಾರಪೇಟೆ ತಾಲ್ಲೂಕು ದೊಡ್ಡವಲಗಮಾದಿ ಗ್ರಾಮದ ನಿವಾಸಿ ಶಶಿಕುಮಾರ್ ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು ರೂ. 1,70,000 ಮೌಲ್ಯದ 2 ಕೆಜಿ 100 ಗ್ರಾಂ ಗಾಂಜಾ ಮಾಲನ್ನು ವಶಪಡಿಸಿಕೊಂಡು ಆರೋಪಿಯಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಿ, ಗಾಂಜಾ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಪಿಐ ಲಕ್ಷ್ಮಿನಾರಾಯಣ, ಸಿಬ್ಬಂದಿ ಎಂ.ವಿ.ರಮೇಶ್, ವಿ.ರಂಗನಾಥ್, ಚೇತನ್‌ಕುಮಾರ್, ಚೇತನ್‌ಯಾದವ್, ಗಜೇಂದ್ರ ಮತ್ತು ಜೀಪ್ ಚಾಲಕ ಶರಣಬಸಪ್ಪ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಅವರು ಶ್ಲಾಘಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

24/06/2025 02:42 pm

Cinque Terre

520

Cinque Terre

0