", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/28305320250627025251filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲಾರ : ಕೋಲಾರ ಜಿಲ್ಲೆಯನ್ನು ನಶೆ ಮುಕ್ತ ಕೋಲಾರ ಮಾಡಲು ನಾವೆಲ್ಲರೂ ಪಣತೊಡಬೇಕು. ನಶೆಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಕನಸಾಗಬೇ...Read more" } ", "keywords": ""substance abuse awareness, Kolar DC appeal, anti-drug campaign, district administration initiative" ", "url": "https://dashboard.publicnext.com/node" }
ಕೋಲಾರ : ಕೋಲಾರ ಜಿಲ್ಲೆಯನ್ನು ನಶೆ ಮುಕ್ತ ಕೋಲಾರ ಮಾಡಲು ನಾವೆಲ್ಲರೂ ಪಣತೊಡಬೇಕು. ನಶೆಮುಕ್ತ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಕನಸಾಗಬೇಕು. ಒಂದು ಜಿಲ್ಲೆಯನ್ನು ನಶೆ ಮುಕ್ತ ಮಾಡಲು ಕಷ್ಟಸಾಧ್ಯ. ಆದರೆ ಎಲ್ಲರ ಸಹಕಾರದಿಂದ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆಶಯ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳು ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು, ದೇಶದ 140 ಕೋಟಿ ಜನಸಂಖ್ಯೆಯಲ್ಲಿ 65 ಕೋಟಿ ಜನಸಂಖ್ಯೆ 35 ವರ್ಷಕ್ಕಿಂತ ಕಡಿಮೆ ಇರುವವರಿದ್ದಾರೆ. ಈ ದೇಶವನ್ನು ಕಟ್ಟಲು ಸಮರ್ಥರಾಗಿದ್ದಾರೆ.
ಅನೇಕರು ಡ್ರಗ್ಸ್ ವ್ಯಸನಿಗಳಾಗುತ್ತಿದ್ದಾರೆ. ಅದನ್ನು ನಿರ್ಮೂಲನೆ ಮಾಡಲು ಜಿಲ್ಲೆಯ ಪ್ರತಿ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ಸಮಿತಿ ಸ್ಥಾಪಿಸಲಾಗುತ್ತಿದೆ. ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಸಮಿತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
Kshetra Samachara
27/06/2025 02:53 pm