", "articleSection": "WaterPower", "image": { "@type": "ImageObject", "url": "https://prod.cdn.publicnext.com/s3fs-public/387839-1751021755-Untitled-design---2025-06-27T162938.615.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1ರಿಂದ ಹೊಸ ಮ...Read more" } ", "keywords": "Bengaluru, BESCOM, smart meter installation, rural areas, new electrical connections, temporary power connections, prepaid system, digital transformation. ", "url": "https://dashboard.publicnext.com/node" }
ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.
ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ.
ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
PublicNext
27/06/2025 04:26 pm