", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/39640520250627061936filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವವು ಜುಲೈ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತ ರಾಮದಾಸ್ ದೇವಸ್...Read more" } ", "keywords": " Chamarajanagar news, Chamarajeshwara Rathotsava, Chamarajeshwara Temple festival, Rathotsava preparations, Chamarajanagar events, Karnataka festivals, Lord Shiva chariot festival, Chamarajeshwara Swamy Temple, July 10th event, ", "url": "https://dashboard.publicnext.com/node" } ಚಾಮರಾಜನಗರ : ಜುಲೈ 10ರಂದು ಶ್ರೀ ಚಾಮರಾಜೇಶ್ವರ ರಥೋತ್ಸವ - ನಗರಸಭೆ ಪೌರಾಯುಕ್ತ ರಾಮದಾಸ್ ಭೇಟಿ, ಪರಿಶೀಲನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ಜುಲೈ 10ರಂದು ಶ್ರೀ ಚಾಮರಾಜೇಶ್ವರ ರಥೋತ್ಸವ - ನಗರಸಭೆ ಪೌರಾಯುಕ್ತ ರಾಮದಾಸ್ ಭೇಟಿ, ಪರಿಶೀಲನೆ

ಚಾಮರಾಜನಗರ : ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವವು ಜುಲೈ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತ ರಾಮದಾಸ್ ದೇವಸ್ಥಾನದ ಸುತ್ತಲಿನ ಸ್ಥಳಗಳು ಹಾಗೂ ರಥ ಸಾಗುವ ರಸ್ತೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.  

ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಹಾಗೂ ರಥ ಸಾಗುವ ರಸ್ತೆಗಳ ಸ್ವಚ್ಚತೆ, ರಥಬೀದಿಯ ಬೀದಿದೀಪಗಳು, ಚರಂಡಿ ವ್ಯವಸ್ಥೆ, ವಾಹನ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ವೀಕ್ಷಿಸಿ ರಥೋತ್ಸವ ಸಿದ್ದತೆಗಾಗಿ ಅಗತ್ಯ ಕ್ರಮಗಳನ್ನು ವಹಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿ ಸಿಬ್ಬಂದಿಗೆ ಸೂಚಿಸಿದರು. 

ಇದೇ ವೇಳೆ ರಥೋತ್ಸವದ ಸಿದ್ದತೆ ಬಗ್ಗೆ ಮಾತನಾಡಿದ ಪೌರಾಯುಕ್ತ ಎಸ್.ವಿ. ರಾಮದಾಸ್, ಆಷಾಢ ಮಾಸದಲ್ಲಿ ನಡೆಯುವ ಶ್ರೀ ಚಾಮರಾಜೇಶ್ವರ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ವಾಹನ ಸಂಚಾರ ಮತ್ತು ಜನದಟ್ಟಣೆ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು. 

ಶ್ರೀ ಚಾಮರಾಜೇಶ್ವರಸ್ವಾಮಿ ರಥೋತ್ಸವವು ಸಾಗುವ ರಸ್ತೆಗಳಲ್ಲಿ ಯಾವುದೇ ಅಡೆತಡೆಗಳು ಆಗದಂತೆ ನೋಡಿಕೊಳ್ಳಬೇಕು. ರಸ್ತೆ ಬದಿಯ ಮರದ ರೆಂಬೆ ಕೊಂಬೆಗಳನ್ನು ತೆರವುಗೊಳಿಸಬೇಕು. ರಥ ಚಲಿಸುವ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಬೇಕು. ರಥ ಸರಾಗವಾಗಿ ಸಾಗುವಂತೆ ಅನುಕೂಲವಾಗಲು ರಥಬೀದಿಯಲ್ಲಿ ಮರಳು ಹಾಕಬೇಕು. ಚರಂಡಿಗಳ ಕಸ ವಿಲೇವಾರಿಯನ್ನು ಆದ್ಯತೆ ಮೇರೆಗೆ ನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅಯ್ಯನ್ ಗೌಡ, ಸಹಾಯಕ ಪೊಲೀಸ್ ಉಪನಿರೀಕ್ಷಕ ವಿಶ್ವ, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ಪರಿಸರ ಇಂಜಿನಿಯರ್ ರೂಪಾ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

27/06/2025 06:16 pm

Cinque Terre

1.06 K

Cinque Terre

0