", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1751079219_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ...Read more" } ", "keywords": "private bus accident, bus overturns, Koppa bus accident, Karnataka road accident, bus trip, injured passengers, road safety, traffic accident, vehicle crash, ", "url": "https://dashboard.publicnext.com/node" }
ಕೊಪ್ಪ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಬಳಿ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರು ಮೂಲದ ಖಾಸಗಿ ಕಂಪನಿಯ 17 ಸಿಬ್ಬಂದಿಗಳು ಪ್ರವಾಸಕ್ಕಾಗಿ ಆಗುಂಬೆ ಕಡೆಗೆ ಹೊರಟಿದ್ದರು.
ಘಾಟಿ ರಸ್ತೆಯಲ್ಲಿ ಬಸ್ಸು ಸಂಚರಿಸುತ್ತಿರುವ ಸಂದರ್ಭ ಚಾಲಕನ ನಿದ್ದೆ ಮಂಪರಿನಲ್ಲಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ. ಪರಿಣಾಮ ಕಾರ್ತಿಕ್, ಮಧು ಹಾಗೂ ಚೈತ್ರ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಪ್ರಕೃತಿ ಸೌಂದರ್ಯ ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ, ಹೀಗಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ವಾರಾಂತ್ಯಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಕಾಫಿನಾಡಿನತ್ತ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಘಟ್ಟ ಪ್ರದೇಶಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಚಾಲಕರ ಅಜಾಗರೂಕತೆ ಹಾಗೂ ವಾತಾವರಣದ ಪರಿಣಾಮ ಈ ರೀತಿ ಅಪಘಾತಗಳು ಹೆಚ್ಚಾಗುತ್ತಿವೆ. ಅಪಘಾತ ಸಂಭವಿಸಿದ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅದೃಷ್ಟವಶಾತ್ ಉಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
PublicNext
28/06/2025 08:23 am