", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/405356-1751104593-PARA.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಸಮರ್ಪಕ ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ ಘಟನೆ ಗದಗನಲ್ಲಿ ನಡೆದಿದೆ. ನಗರದ 32ನೇ ವಾರ್ಡ್ ಮಹ...Read more" } ", "keywords": "Gadag, water scarcity, women's protest, drinking water issue, public health concern.", "url": "https://dashboard.publicnext.com/node" } ಗದಗ: ಕುಡಿಯುವ ನೀರಿಗಾಗಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಕುಡಿಯುವ ನೀರಿಗಾಗಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ

ಗದಗ: ಸಮರ್ಪಕ ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡಿದ ಘಟನೆ ಗದಗನಲ್ಲಿ ನಡೆದಿದೆ.

ನಗರದ 32ನೇ ವಾರ್ಡ್ ಮಹಿಳೆಯರು ಮುಳಗುಂದ ನಾಕಾದಲ್ಲಿ ಖಾಲಿ‌ ಕೊಡಗಳನ್ನು ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಕಳೆದ ಒಂದು ತಿಂಗಳಿಂದ ನೀರು ಪೂರೈಕೆಯಾಗುತ್ತಿಲ್ಲ. ಮಹಿಳೆಯರು, ಮಕ್ಕಳು, ವೃದ್ಧರು ನೀರಿಗಾಗಿ ಪರದಾಡುವ ಪರಸ್ಥಿತಿ ಎದುರಾಗಿದೆ. ಸಂಬಂಧಿಸಿದ ವಾರ್ಡ್ ಸದಸ್ಯರಿಗೆ ಹೇಳಿದರೂ ಏನೂ ಪ್ರಯೋಜನವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕುಡಿಯುವ ನೀರಿಲ್ಲದ ಕಾರಣ ಮಹಿಳೆಯರು ಖಾಲಿ ಕೊಡಗಳ ಸಮೇತ ನಡು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ನೀರು ಕೊಡಿ ಇಲ್ಲಾಂದ್ರೆ ರಸ್ತೆ ಬಿಟ್ಟು ಕದಲೋದಿಲ್ಲ ಅಂತಾ ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಬಂದ ನಗರಸಭೆ ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು. ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಇದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

Edited By : Vinayak Patil
PublicNext

PublicNext

28/06/2025 03:26 pm

Cinque Terre

16.58 K

Cinque Terre

0

ಸಂಬಂಧಿತ ಸುದ್ದಿ