ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ : ಕುಂಜಾಲು ಮುಖ್ಯ ರಸ್ತೆಯಲ್ಲಿ ಗೋವಿನ ರುಂಡ ಎಸೆದ ದುಷ್ಕರ್ಮಿಗಳು- ಸ್ಥಳಕ್ಕೆ ಶಾಸಕ ಭೇಟಿ

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕುಂಜಾಲು ಮುಖ್ಯ ರಸ್ತೆಯಲ್ಲಿ ನಿನ್ನೆ ರಾತ್ರಿ ಸುಮಾರು 11.30 ಗಂಟೆ ಸಮಯದಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಪತ್ತೆಯಾಗಿವೆ. ಇದನ್ನು ಯಾರೋ ದುಷ್ಕರ್ಮಿಗಳು ಎಸೆದಿರುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸ್ಥಳೀಯರೊಂದಿಗೆ ಮಾಹಿತಿ ಪಡೆದರು. ಈ ಘಟನೆಯ ಬಗ್ಗೆ ಸ್ಥಳೀಯರಲ್ಲಿ ಗೊಂದಲ ಮೂಡಿದ್ದು, ಪೊಲೀಸ್ ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಕ್ಷಣ ಕೂಲಂಕುಷ ತನಿಖೆ ನಡೆಸಬೇಕು ಎಂದು ಶಾಸಕರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಾಜೀವ್ ಕುಲಾಲ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Edited By : Abhishek Kamoji
PublicNext

PublicNext

29/06/2025 01:58 pm

Cinque Terre

19.15 K

Cinque Terre

0

ಸಂಬಂಧಿತ ಸುದ್ದಿ