", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1751187633-Untitled-design---2025-06-29T143404.433.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಂಬೈ: ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆ ಹಾಗೂ ತ್ರಿಭಾಷಾ ಸೂತ್ರ ಜಾರಿ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಹಾಗೂ ಎನ್‌ಸಿಪಿ ...Read more" } ", "keywords": "Maharashtra, Deputy Chief Minister, opposition, Hindi compulsory from Class 1. ", "url": "https://dashboard.publicnext.com/node" }
ಮುಂಬೈ: ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆ ಹಾಗೂ ತ್ರಿಭಾಷಾ ಸೂತ್ರ ಜಾರಿ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಸಿಎಂ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸಭೆಯ ಮುಂಗಾರು ಅಧಿವೇಶನದ ಮುನ್ನಾದಿನ ಮಾತನಾಡಿರುವ ಅವರು, 1ನೇ ತರಗತಿಯಿಂದಲೇ ಹಿಂದಿ ಕಲಿಕೆ ಕಡ್ಡಾಯಗೊಳಿಸುವ ಕ್ರಮವನ್ನು ಬೆಂಬಲಿಸುವುದಿಲ್ಲ. ಆದರೆ, 5ನೇ ತರಗತಿಯಿಂದ ಮೂರನೇ ಭಾಷೆ ಆಯ್ಕೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ತೀರ್ಮಾನಿಸಬಹುದು ಎಂದಿದ್ದಾರೆ. ಹಾಗೆಯೇ, ಆರಂಭದಿಂದಲೂ ನಾವು ಹಿಂದಿ ಹೇರಿಕೆ ಪರವಾದ ನಿಲುವು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
"ಹಿಂದಿ ಭಾಷೆ ಕಲಿಕೆ ಕಡ್ಡಾಯವಿಲ್ಲ. ಆಯಾ ರಾಜ್ಯದ ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಕಲಿಯಬೇಕು ಎಂಬುದರಲ್ಲಿ ನಂಬಿಕೆ ಹೊಂದಿದ್ದೇವೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಓದುವವರು ಮರಾಠಿ ಭಾಷೆ ಕಲಿಯುವುದು ಕಡ್ಡಾಯವಾಗಿದೆ. ಐದನೇ ತರಗತಿಯಿಂದ ಹಿಂದಿ ಕಲಿಯುವ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಲೋಚಿಸಿ, ನಿರ್ಧಾರ ಕೈಗೊಳ್ಳಬೇಕು' ಎಂದು ಹೇಳಿದ್ದಾರೆ.
PublicNext
29/06/2025 02:32 pm