ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಸ್ತಾಕ್ ಆಯ್ಕೆ- ಡಾ.ಮಹೇಶ್ ಜೋಶಿ ಘೋಷಣೆ

ಬಳ್ಳಾರಿ: ಡಿಸೆಂಬರ್‌ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸಲಾಗಿದೆ.

ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪ ರಾಜ್ಯಾಧ್ಯಕ್ಷರಾದ ಮಹೇಶ್ ಜೋಷಿ ಮಾತನಾಡಿ, ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಜೂನ್‌ 29ರಂದು ಬಳ್ಳಾರಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಸ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.

Edited By : Manjunath H D
PublicNext

PublicNext

29/06/2025 05:12 pm

Cinque Terre

26.58 K

Cinque Terre

0