", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/405356-1751202285-marali.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಡೂರು: ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಕಾಡಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯ...Read more" } ", "keywords": "Kadur, forest guard missing, mystery, police investigation, forest staff search.", "url": "https://dashboard.publicnext.com/node" }
ಕಡೂರು: ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಕಾಡಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಅರಣ್ಯದಲ್ಲಿ ನಡೆದಿದೆ. ಶರತ್ (33) ಎಂಬುವವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.
ಮೂಲತಃ ಮಡಿಕೇರಿ ಮೂಲದ ಶರತ್ ಅವರು, ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ, ಕಳೆದ ಮೂರು ದಿನಗಳಿಂದ ಅವರ ಬಗ್ಗೆ ಯಾವುದೇ ಸುಳಿವು ಸಿಗದೇ ಇರುವುದರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ವೇಳೆ ಅವರ ಬೈಕ್ ಹಾಗೂ ಜರ್ಕಿನ್ ಅರಣ್ಯದಲ್ಲಿ ಪತ್ತೆಯಾಗಿದ್ದು, ಇದರಿಂದ ಶೋಧ ಕಾರ್ಯ ಮತ್ತಷ್ಟು ಚುರುಕುಗೊಳಿಸಲಾಗಿದೆ.
ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶ್ವಾನದಳ ಸೇರಿದಂತೆ ಡ್ರೋನ್ ಕಾರ್ಯಾಚರಣೆ ನಡೆಸಿ ನಿರಂತರ ಹುಡುಕಾಟದಲ್ಲಿ ತೊಡಗಿದ್ದಾರೆ.
PublicNext
29/06/2025 06:35 pm