ಚಂಡೀಗಢ: ಪಂಜಾಬ್‌ನ ಫಿರೋಜ್‌ಪುರದಲ್ಲಿ ನಡೆದ ಲೋಕಲ್ ಕ್ರಿಕೆಟ್ ಪಂದ್ಯದ ವೇಳೆ, ಸಿಕ್ಸ್ ಬಾರಿಸಿದ ಕೆಲವೇ ಸೆಕೆಂಡುಗಳಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮೃತ ವ್ಯಕ್ತಿಯನ್ನು ಹರ್ಜೀತ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಡಿಎವಿ ಶಾಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾಗವಹಿಸುತ್ತಿದ್ದರು. ವೈರಲ್ ಆಗಿರುವ ವಿಡಿಯೋದಲ್ಲಿ, ಹರ್ಜೀತ್ ಎಸೆತವನ್ನು ಎದುರಿಸಲು ಸಿದ್ಧರಾಗುತ್ತಿರುವುದನ್ನು ಮತ್ತು ಸಿಕ್ಸರ್ ಹೊಡೆಯುವುದನ್ನು ಕಾಣಬಹುದಾಗಿದೆ. ಅದಾದ ಕೆಲವು ಕ್ಷಣಗಳ ನಂತರ, ಅವರು ಮೈದಾನದ ಮಧ್ಯಭಾಗಕ್ಕೆ ನಡೆದು, ಮೊಣಕಾಲುಗಳ ಮೇಲೆ ಕುಳಿತು ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಾರೆ.
ಅಲ್ಲಿದ್ದ ಆಟಗಾರರು ಹರ್ಜೀತ್ ಅವರತ್ತ ದೌಡಾಯಿಸಿ ಸಹಾಯಕ್ಕೆ ಧಾವಿಸಿ ಸಿಪಿಆರ್ ಮಾಡಲು ಪ್ರಯತ್ನಿಸಿದರು. ಆದರೆ ಅವರು ಪ್ರಜ್ಞೆ ಮರಳಿ ಪಡೆಯಲಿಲ್ಲ. ಸ್ವಲ್ಪ ಸಮಯದ ನಂತರ ಅವರನ್ನು ಮೃತಪಟ್ಟರು ಎಂದು ಘೋಷಿಸಲಾಯಿತು. ಸಾವಿಗೆ ಹೃದಯಾಘಾತವೇ ಕಾರಣ ಎಂದು ದೃಢಪಡಿಸಲಾಗಿದೆ ಎಂದು ವರದಿಯಾಗಿದೆ.
PublicNext
29/06/2025 06:44 pm