", "articleSection": "Religion", "image": { "@type": "ImageObject", "url": "https://prod.cdn.publicnext.com/s3fs-public/405356-1751207379-bagi.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸುಬ್ರಹ್ಮಣ್ಯ: ತಮಿಳುನಾಡಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕುಟುಂಬ ಸಮೇತ ಕುಕ್ಕೆ ...Read more" } ", "keywords": "Annamalai, temple visit, family darshan, Karnataka temples, religious visit, temple darshan, Annamalai news, family visit.", "url": "https://dashboard.publicnext.com/node" }
ಸುಬ್ರಹ್ಮಣ್ಯ: ತಮಿಳುನಾಡಿನ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನಕ್ಕೆ ಇಂದು ಆಗಮಿಸಿದ್ರು. ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅಣ್ಣಾಮಲೈ,
"ನಾನು ಕಳೆದ ಹತ್ತು- ಹದಿನೈದು ವರ್ಷಗಳಿಂದ ಸ್ವಾಮೀಜಿಗಳ ಹತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಾ ಇದ್ದೇನೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದು ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು ಹಾಗೂ ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ" ಎಂದರು.
PublicNext
29/06/2025 07:59 pm