", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751212415-sal.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MaheshKalburgi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಲಬುರಗಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸ...Read more" } ", "keywords": "Kalaburagi microfinance harassment, suicide due to microfinance, protest in Kalaburagi, microfinance victim, road blockade protest Kalaburagi.", "url": "https://dashboard.publicnext.com/node" } ಕಲಬುರಗಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಹೆಣ- ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಹೆಣ- ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ

ಕಲಬುರಗಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ‌ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೆಪೇಟ್ ಗ್ರಾಮದಲ್ಲಿ ನಡೆದಿದೆ.

ಸೈಯದ್ ಸಲೀಂ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಸಲೀಂ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಖಾಸಗಿ ಫೈನಾನ್ಸ್ ಮತ್ತು ಬ್ಯಾಂಕ್ ನಲ್ಲಿ 20 ಲಕ್ಷ‌ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ವಾಪಸ್ ಕೊಡುವಂತೆ ಟಾರ್ಚರ್ ಮಾಡಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸುಲೆಪೇಟ್ ಪಟ್ಟಣದ ಸರ್ಕಲ್ ನಲ್ಲಿ ಸಲೀಂ ಶವವಿಟ್ಟು ಕುಟುಂಬಸ್ಥರು ಹಾಗೂ ಗ್ರಾಮದ ಜನರು‌ ಸೇರಿ ಪ್ರತಿಭಟನೆ ಮಾಡಲಾಯಿತು. ಸ್ಥಳಕ್ಕೆ ಸುಲೆಪೇಟ್ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Manjunath H D
PublicNext

PublicNext

29/06/2025 09:23 pm

Cinque Terre

20.13 K

Cinque Terre

0