", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1751271178-dvg.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnnappaDavanagere" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಕಳ್ಳರ ಯತ್ನ ವಿಫಲ ಆಗಿದೆ. ಎಟಿಎಂಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಕಳ್ಳರ...Read more" } ", "keywords": "ATM robbery attempt Davangere, petrol poured ATM theft, Davanagere crime news, ATM break-in failure, Davangere police investigation, thieves fail to break ATM.", "url": "https://dashboard.publicnext.com/node" }
ದಾವಣಗೆರೆ: ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಕಳ್ಳರ ಯತ್ನ ವಿಫಲ ಆಗಿದೆ. ಎಟಿಎಂಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಕಳ್ಳರು ಕಾಲ್ಕಿತ್ತಿರುವ ಘಟನೆ ನಡೆದಿದೆ.
ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹಣ ದೋಚಲು ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದರು. ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಸರಳುಗಳು ಒಡೆಯಲು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಕಳ್ಳರು ಬೆಂಕಿ ಹಚ್ಚಿದ್ದಾರೆ.
ಈ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಕಳ್ಳರು ಎಸ್ಕೇಪ್ ಆಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿ ದೌಡಾಯಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ ಎಂದು ಪೋಲಿಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
PublicNext
30/06/2025 01:43 pm