", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/styles/large/public/videos/thumbnails/2259769/thumbnail-2259769_0001.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ರಾಜಸ್ಥಾನದ ಕೋಟಾದ ಕೈತುನಿಪೋಲ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ. ...Read more" } ", "keywords": "bike owner denies bike ownership, shop owner assaulted by police, police attack shop owner, bike dispute leads to police brutality, shop owner beaten by police, false bike ownership claim, police aggression, bike shop dispute. ", "url": "https://dashboard.publicnext.com/node" }
ರಾಜಸ್ಥಾನದ ಕೋಟಾದ ಕೈತುನಿಪೋಲ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚರ್ಚೆಗೆ ಗ್ರಾಸವಾಗಿದೆ.
ಕೈತುನಿಪೋಲ್ ಠಾಣೆಯ SHO ಪುಷ್ಪೇಂದ್ರ ಬನ್ಸಿವಾಲ್ ಅವರು, ಅಂಗಡಿಯ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ತೆಗೆಯುವಂತೆ ಅಂಗಡಿ ಮಾಲೀಕನಿಗೆ ಹೇಳಿದ್ದಾರೆ ಆದರೆ ಅಂಗಡಿ ಮಾಲೀಕ, "ಅದು ನನ್ನ ಬೈಕ್ ಅಲ್ಲ, ಲಾಕ್ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಮಾತಿಗೆ ಕೋಪಗೊಂಡ SHO, ತನ್ನ ಸಹೋದ್ಯೋಗಿಗಳೊಂದಿಗೆ ಮಾಲೀಕನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಹೊಡೆತದಿಂದ ಆ ವ್ಯಕ್ತಿ ತಕ್ಷಣವೇ ನೆಲಕ್ಕುರುಳಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಎನ್ನಲಾಗಿದೆ.
ಘಟನೆ ಸಂಬಂಧ ಸ್ಥಳೀಯ ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪೋಲೀಸರ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ಪ್ರಾರಂಭಿಸಿರುವ ಮಾಹಿತಿ ಲಭಿಸಿದೆ.
ಪೀಡಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
PublicNext
30/06/2025 03:28 pm