ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಶ್ರೀರಾಮಸೇನೆಯ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದ ಶ್ರೀರಾಮಸೇನೆಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿ ಎಸ್ ಪಿ ಕಚೇರಿ ಎದುರು ಬಿಜೆಪಿ ಮತ್ತು ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಕ್ಕೇರಿ ತಾಲೂಕಿನಲ್ಲಿ ಶ್ರೀರಾಮಸೇನೆಯ ಕಾರ್ಯಕರ್ತರ ಮೇಲೆ ಆತಂಕವಾದಿಗಳಂತೆ ಅಮಾನುಷವಾಗಿ ಹಲ್ಲೆಯನ್ನು ನಡೆಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಕಾಣಿಸಿಕೊಂಡ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಕುರಿತಾದ ಮನವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಭೀಮಾಶಂಕರ್ ಗುಳೇದ್ ಅವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀರಾಮಸೇನೆ ಮತ್ತು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Edited By : Vinayak Patil
PublicNext

PublicNext

30/06/2025 04:42 pm

Cinque Terre

7.41 K

Cinque Terre

0

ಸಂಬಂಧಿತ ಸುದ್ದಿ