", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1751282909-c.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕಾಂಗ್ರೆಸ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದು ಹೇಳುತ್ತಿದ್ದಾರೆ. ಅದು ಸರ್ಕಾರ ಬೀಳುತ್ತದೆಯೋ ಅಥವಾ ಸಿದ್ದರಾಮಯ್ಯ ತಮ್ಮ ಸ್ಥಾನದಿ...Read more" } ", "keywords": "Shivamogga, KSE Eshwarappa, Siddaramaiah, Karnataka government.", "url": "https://dashboard.publicnext.com/node" }
ಶಿವಮೊಗ್ಗ : ಕಾಂಗ್ರೆಸ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದು ಹೇಳುತ್ತಿದ್ದಾರೆ. ಅದು ಸರ್ಕಾರ ಬೀಳುತ್ತದೆಯೋ ಅಥವಾ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಇಳಿಯುತ್ತಾರೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಸುರ್ಜೆವಾಲಾರವರು ಕೇವಲ 40 ಜನ ಶಾಸಕರನ್ನು ಕರೆದು, ಸಭೆ ನಡೆಸುತ್ತಿದ್ದಾರೆ. 136 ಜನರಲ್ಲಿ ಈ 40 ಜನರನ್ನು ಮಾತ್ರ ಏಕೆ ಗುಂಪು ಕಟ್ಟಿಕೊಂಡು ಚರ್ಚೆ ಮಾಡುತ್ತಾರೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಜಾತ್ಯಾತೀತ ಮತ್ತು ಸಮಾಜವಾದಿ ಎಂಬ ಎರಡು ಪದಗಳನ್ನು ಇಂದಿರಾಗಾಂಧಿಯವರು ತಮ್ಮ ಸರ್ವಾಧಿಕಾರದ ಅವಧಿಯಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿ, ಸಂವಿಧಾನದ ಮೂಲ ಪೀಠಿಕೆಯಲ್ಲಿ 1976ರ ಡಿಸೆಂಬರ್ 18ರಂದು ಸೇರಿಸಿದ್ದಾರೆ. ಈ ಎರಡು ಪದಗಳು ತುರ್ತು ಪರಿಸ್ಥಿತಿಯಲ್ಲಿ ತುರುಕಿದ ಪದಗಳಾಗಿವೆ. ಆದರೆ ಕಾಂಗ್ರೆಸ್ಸಿಗರು ಇದನ್ನು ಮರೆತು ಈಗ ಸಂವಿಧಾನ ವಿರೋಧಿ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
PublicNext
30/06/2025 04:58 pm