", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/454738-1751283121-New-(1280-x-720-px)-(37).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅನುಮತಿ ಪಡೆಯದೆ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿರುವುದರ ಕುರಿತು ಪೊಲೀಸ್ ಕಮೀಷನರ್ ಗ...Read more" } ", "keywords": "Police Commissioner Complaint: BJP files report against Congress workers ", "url": "https://dashboard.publicnext.com/node" }
ಬೆಂಗಳೂರು : ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅನುಮತಿ ಪಡೆಯದೆ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿರುವುದರ ಕುರಿತು ಪೊಲೀಸ್ ಕಮೀಷನರ್ ಗೆ ಬಿಜೆಪಿ ದೂರು ನೀಡಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗ ಬೆಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ಇದೇ 28ರಂದು ನಮ್ಮ ಪಕ್ಷದ ಕಚೇರಿಯಲ್ಲಿ ಸಭೆ ನಡೆದು ಹೊರಬರುತ್ತಿರುವಾಗ ಕಾಂಗ್ರೆಸ್ಸಿನ ಸುಮಾರು 13 ಕಾರ್ಯಕರ್ತರು ಬಂದು ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನಮ್ಮಲ್ಲೂ 200-300 ಕಾರ್ಯಕರ್ತರು ಅಲ್ಲೇ ನಿಂತಿದ್ದರು. ನಾವು ಮನಸ್ಸು ಮಾಡಿದ್ದರೆ ಅಲ್ಲೇ ಅವರನ್ನು ತಡೆಯಬಹುದಿತ್ತು. ಆದ್ರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರ ಹಕ್ಕನ್ನು ನಾವು ಗೌರವಿಸುತ್ತೇವೆ. ಆದರೆ, ಅನುಮತಿ ಇಲ್ಲದೆ, ಪೊಲೀಸರಿಗೆ ಗೊತ್ತೇ ಇಲ್ಲದಂತೆ ಪ್ರತಿಭಟಿಸಿದರೆ ಅದು ಗೂಂಡಾವರ್ತಿ ಆಗುತ್ತದೆ ಎಂದರು.
ಬಂಧಿಸಿ ಕರೆದೊಯ್ದ 15 ನಿಮಿಷಕ್ಕೆ ಮತ್ತೊಮ್ಮೆ ಏಳೆಂಟು ಜನರು ಪ್ರತಿಭಟನೆ ಮಾಡಿದ್ದಾರೆ. 13ರಂದು 26ರಂದು ಸೇರಿ ಒಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಈ ರೀತಿ ಪ್ರತಿಭಟಿಸಿದ್ದಾರೆ ಎಂದು ಟೀಕಿಸಿದರು.
PublicNext
30/06/2025 05:02 pm