", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1751287209-WhatsApp-Image-2025-06-30-at-6.10.01-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮೂರು: ಬೈಕ್ ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ. ನಾಗಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ...Read more" } ", "keywords": "Molakalmuru KSRTC bus accident, bike accident avoidance, road divider incident, passenger safety concerns, Karnataka road accidents.", "url": "https://dashboard.publicnext.com/node" }
ಮೊಳಕಾಲ್ಮೂರು: ಬೈಕ್ ಅಪಘಾತ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ ಮೇಲೆ ಹತ್ತಿದ ಘಟನೆ ನಡೆದಿದೆ. ನಾಗಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಮಧ್ಯಾಹ್ನ 1ಗಂಟೆಗೆ ಸುಮಾರಿಗೆ ಈ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಮುಂಭಾಗದಲ್ಲಿ ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಸವಾರ ಏಕಾಏಕಿ ರಸ್ತೆಯ ಬಲ ಬದಿಗೆ ಬಂದ ಕಾರಣ, ಹಿಂದೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ ಅಪಘಾತವನ್ನು ತಪ್ಪಿಸಲು ಹೋಗಿ ರಸ್ತೆಯ ಡಿವೈಡರ್ ಮೇಲೆ ಬಸ್ ಹತ್ತಿಸಿದ್ದಾನೆ.
ಸದ್ಯ ಚಾಲಕನ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದಂತಾಗಿದೆ. ಬಸ್ಸಿನಲ್ಲಿ ಒಟ್ಟು 36 ಜನ ಪ್ರಯಾಣಿಕರಿದ್ದು ಯಾರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ 67 ವರ್ಷದ ಅಜ್ಜಿ ಬೈಕ್ ನಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಪಿಎಸ್ಐ ಬಾಹುಬಲಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
PublicNext
30/06/2025 06:11 pm