ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಗರದಲ್ಲಿ ನಡೆದಿದೆ ಅಕ್ರಮ ಗ್ಯಾಸ್ ದಂಧೆ

ಹುಬ್ಬಳ್ಳಿ : ಗ್ಯಾಸ್‌ ಸಿಲಿಂಡರ್‌ನಿಂದ ಧಾರವಾಡ ಜಿಲ್ಲೆಯಲ್ಲಿ ನಡೆದ ದುರಂತಗಳು ಮರೆಯಾಗುವ ಮುನ್ನವೇ‌ ಸಿಲಿಂಡರ್ ಅವಘಡಗಳಿಗೆ ಪರೋಕ್ಷ ಕಾರಣವಾಗಿರುವ ಅಕ್ರಮ ಗ್ಯಾಸ್ ಸಿಲಿಂಡರ್ ದಂಧೆಗಳು ಬೆಳಕಿಗೆ ಬಂದಿವೆ.

ಹಳೇ ಹುಬ್ಬಳ್ಳಿಯ ಕೆಂಪಗೇರಿ ಎಂಬ ಪ್ರದೇಶದಲ್ಲಿ ಗ್ಯಾಸ್ ಅಕ್ರಮ ದಾಸ್ತಾನಿನ ಬಗ್ಗೆ ವರದಿಯಾಗಿದೆ‌‌. ಸುಮಾರು 409 ವಾಣಿಜ್ಯ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿ - ಧಾರವಾಡದಲ್ಲಿ ದಿನದಿಂದ ದಿನಕ್ಕೆ ಈ ಗ್ಯಾಸ್ ಸಿಲಿಂಡರ್ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಸಿಲಿಂಡರ್ ಅಕ್ರಮ ದಾಸ್ತಾನಿನ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ‌ ರಾಜೇಸಾಬ ಕಟ್ಟಿಮನಿ ಎಂಬಾತನನ್ನು ಬಂಧಿಸಿದ್ದಾರೆ. ನಾಪತ್ತೆಯಾದ ಇನ್ನೋರ್ವನ ಬಗ್ಗೆ ತನಿಖೆ ನಡೆಯುತ್ತಿದ್ದು ಆತ ಯಾರು ಎನ್ನುವುದು ತಿಳಿದು ಬಂದಿಲ್ಲ...

ಒಟ್ಟಿನಲ್ಲಿ ಸುರಕ್ಷತೆಯ ದೃಷ್ಟಿಯಿಂದ ಈ ರೀತಿಯ ಗ್ಯಾಸ್ ಸಿಲಿಂಡರ್ ಅಕ್ರಮ ಚಟುವಟಿಕೆಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂಬುದು ಪಬ್ಲಿಕ್ ನೆಕ್ಸ್ಟ್ ಕಳಕಳಿ.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/06/2025 07:08 pm

Cinque Terre

35.25 K

Cinque Terre

1

ಸಂಬಂಧಿತ ಸುದ್ದಿ