ಸಾಗರ: ತಾಲೂಕಿನ ಅವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದ ನಿವಾಸಿ ರೇಣುಕೇಶ್ ಎಂಬುವವರ 14 ವರ್ಷದ ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಅತ್ಮಹತ್ಯೆ ಮಾಡಿಕೊಂಡಿರುವ ಬಾಲಕ ಇಕ್ಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಾಲಕನ ಮೃತದೇಹವನ್ನು ಸಾಗರ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದ್ದು, ತನಿಖೆಯ ನಂತರ ಬಾಲಕನ ಸಾವಿನ ನಿಖರ ಮಾಹಿತಿ ತಿಳಿದು ಬರಬೇಕಿದೆ.
PublicNext
30/06/2025 10:56 pm