", "articleSection": "Entertainment,Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1752489302-Untitled-design---2025-07-14T160828.455.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪುದುಚೇರಿ: ಮಿಸ್ ಪುದುಚೇರಿ ಪ್ರಶಸ್ತಿ ಪುರಸ್ಕೃತ, ಮಾಡೆಲ್ ಮತ್ತು ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪು...Read more" } ", "keywords": "Miss Pondicherry, San Rachel, suicide case, beauty pageant controversy, mental health issue. ", "url": "https://dashboard.publicnext.com/node" }
ಪುದುಚೇರಿ: ಮಿಸ್ ಪುದುಚೇರಿ ಪ್ರಶಸ್ತಿ ಪುರಸ್ಕೃತ, ಮಾಡೆಲ್ ಮತ್ತು ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುದುಚೇರಿಯಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
26 ವರ್ಷದ ಸ್ಯಾನ್ ರೆಚಲ್ ಅವರು ಇತ್ತೀಚೆಗೆ ತಮ್ಮ ತಂದೆಯ ಮನೆಗೆ ಭೇಟಿ ನೀಡಿದ್ದ ವೇಳೆ ಹೆಚ್ಚು ಮಾತ್ರೆಗಳನ್ನು ಸೇವಿಸಿದ್ದಾಗಿ ತಿಳಿದುಬಂದಿದೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್ ರೆಚಲ್ ಸಾವನ್ನಪ್ಪಿದ್ದಾರೆ.
ಆರ್ಥಿಕ ಒತ್ತಡ ಮತ್ತು ವೈಯಕ್ತಿಕ ಒತ್ತಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸ್ಯಾನ್ ರೆಚಲ್ ಡೆತ್ ನೋಟ್‌ನಲ್ಲಿ ಆಕೆಯ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಸದ್ಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ಆಕೆಯ ವೈವಾಹಿಕ ಜೀವನದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ.
ಲಂಡನ್, ಜರ್ಮನಿ, ಮತ್ತು ಫ್ರಾನ್ಸ್ ನಂತಹ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ರೆಚಲ್, ತಮ್ಮ ಸಾಧನೆಗಳ ಮೂಲಕ ಅನೇಕ ಯುವತಿಯರಿಗೆ ಸ್ಫೂರ್ತಿಯಾಗಿದ್ದರು. ಸ್ಯಾನ್ ರೆಚಲ್ ಕೇವಲ ಮಾಡೆಲಿಂಗ್ ಲೋಕದಲ್ಲಿ ಮಿಂಚಿದ್ದಲ್ಲದೇ ವರ್ಣಭೇದ ನೀತಿಯನ್ನು ಪ್ರಶ್ನಿಸಿ, ಮಹಿಳಾ ಸುರಕ್ಷತೆಗಾಗಿ ಹೋರಾಡಿದ್ದರು.
PublicNext
14/07/2025 04:05 pm