", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1752599025-sahi.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕ...Read more" } ", "keywords": "Bengaluru, human-elephant conflict, IISC collaboration, forest department, wildlife conservation, Karnataka news.", "url": "https://dashboard.publicnext.com/node" } ಬೆಂಗಳೂರು : ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಐಐಎಸ್ಸಿ ಜೊತೆ ಅರಣ್ಯ ಇಲಾಖೆ ಒಡಂಬಡಿಕೆ !
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಆನೆ-ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಐಐಎಸ್ಸಿ ಜೊತೆ ಅರಣ್ಯ ಇಲಾಖೆ ಒಡಂಬಡಿಕೆ !

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡರು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ. ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು.

ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು ವರ್ಷಗಳ ಸಹಯೋಗದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.

ಸ್ಯಾಟಲೈಟ್ ಟೆಲಿಮೆಟ್ರಿ, ಕ್ಯಾಮೆರಾ ಟ್ರಾಪ್‌ ಗಳು ಮತ್ತು ಜಿ.ಐ.ಎಸ್. ಮಾದರಿಗಳನ್ನು ಬಳಸಿಕೊಂಡು ಆನೆ ಕಾರಿಡಾರ್‌ ಗಳನ್ನು ಗುರುತಿಸುವುದು ಮತ್ತು ಆನೆಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆತಡೆಗಳನ್ನು ಗುರುತಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಆನೆ ಲದ್ದಿಯಲ್ಲಿರುವ ಹಾರ್ಮೋನ್ ಗಳ ಪರೀಕ್ಷೆ ನಡೆಸುವ ಮೂಲಕ ಆನೆಗಳ ದೇಹದ ಸ್ಥಿತಿ ಮತ್ತು ಒತ್ತಡ ಸೂಚಕಗಳನ್ನು ಅಂದಾಜು ಮಾಡಲಾಗುತ್ತದೆ. ಅದೇ ರೀತಿ ಬೆಳೆ ನಾಶದ ಮಾದರಿಗಳ ಅಧ್ಯಯನ, ಸಂಘರ್ಷದ ಹಾದಿ ತುಳಿದ ಆನೆಗಳ ಅಧ್ಯಯನ - ವಿಶ್ಲೇಷಣೆ ಮಾಡಿ ರೈತರಿಗೆ ಅರಿವು ಮೂಡಿಸುವುದೂ ಈ ಯೋಜನೆಯ ಭಾಗವಾಗಿದೆ ಎಂದು ತಿಳಿಸಿದರು.

ಆನೆಗಳು ನಾಡಿನತ್ತ ಬಂದಾಗ ಮುನ್ನೆಚ್ಚರಿಕೆಯ ಗಂಟೆ ಮೊಳಗಿಸುವ ವ್ಯವಸ್ಥೆ ರೂಪಿಸುವ ಹಾಗೂ ಸ್ವಯಂ ಚಾಲಿತ ಧ್ವನಿಯಂತ್ರಗಳ ಮೂಲಕ ಆನೆಗಳನ್ನು ಹಿಮ್ಮೆಟ್ಟಿಸುವ ಬಗ್ಗೆಯೂ ಅಧ್ಯಯನ ನಡೆಸಲಾಗುವುದು ಎಂದು ತಿಳಿಸಿದರು.

ಅರಣ್ಯ ಇಲಾಖೆ ಮತ್ತು ಭಾರತೀಯ ವಿಜ್ಞಾನ ಮಂದಿರದ ತಜ್ಞರು, ಅಧ್ಯಯನಿಗಳು ಆನೆಗಳ ವರ್ತನೆ, ಸ್ವಭಾವದ ದತ್ತಾಂಶ ಕ್ರೋಡೀಕರಿಸಿ ಆನೆಪಥ (ಕಾರಿಡಾರ್) ಹಾಗೂ ಮುಂದಿನ 10 ವರ್ಷಗಳಲ್ಲಿ ಎದುರಾಗಬಹುದಾದ ಭವಿಷ್ಯದ ಸಂಘರ್ಷ ಪ್ರದೇಶ ಗುರುತಿಸಲೂ ಈ ಅಧ್ಯಯನ ನೆರವಾಗಲಿದೆ ಎಂದರು.

ಪ್ರೊ. ರಮನ್ ಸುಕುಮಾರ್ ಮಾತನಾಡಿ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ನಾವು ಕಾರಣಗಳನ್ನು ತಿಳಿಯುವುದು ಇಂದಿನ ಅಗತ್ಯವಾಗಿದೆ, ಈ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವಪೂರ್ಣವಾದುದಾಗಿದೆ ಎಂದರು.

ಈ ಅಧ್ಯಯನದಿಂದ ಅಥವಾ ಯೋಜನೆಯ ಅನುಷ್ಠಾನದಿಂದ ಸಂಪೂರ್ಣವಾಗಿ ಮಾನವ-ಆನೆ ಸಂಘರ್ಷ ನಿರ್ಮೂಲನೆ ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಪರಿಣಾಮಕಾರಿಯಾಗಿ ಸಂಘರ್ಷ ತಗ್ಗಿಸಬಹುದಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Edited By : Vinayak Patil
PublicNext

PublicNext

15/07/2025 10:33 pm

Cinque Terre

85.51 K

Cinque Terre

0

ಸಂಬಂಧಿತ ಸುದ್ದಿ