", "articleSection": "Crime,Government", "image": { "@type": "ImageObject", "url": "https://prod.cdn.publicnext.com/s3fs-public/235762-1752634408-Add-a-subheading-(41).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: ಸರಕಾರಿ ಜಮೀನಿಗೆ ನಿಯಮಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನೆಲೆ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ...Read more" } ", "keywords": "Government land scam, IAS officer FIR, Vasanthi Amar case, illegal land allocation, government land encroachment, IAS officer Vasanthi Amar controversy, corruption case against IAS officer", "url": "https://dashboard.publicnext.com/node" }
ಬೆಂಗಳೂರು: ಸರಕಾರಿ ಜಮೀನಿಗೆ ನಿಯಮಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನೆಲೆ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಸಹಾಯಕ ಪ್ರಶಾಂತ್ ಖಾನಗೌಡ ಪಾಟೀಲ್ ಅವರು ಹಲಸೂರು ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದಾರೆ.
ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಕ್ರಮ ಕಾನೂನು ಬಾಹಿರವಾಗಿರುವ ಹಿನ್ನೆಲೆ ಇದೀಗ ಅವರ ವಿರುದ್ಧ FIR ದಾಖಲಾಗಿದೆ.
ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್‌ಸಿಆರ್ ನಂಬರ್ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರಡಿ 257 ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
PublicNext
16/07/2025 08:25 am