", "articleSection": "Cinema", "image": { "@type": "ImageObject", "url": "https://prod.cdn.publicnext.com/s3fs-public/52563-1752652742-_(1280-x-720-px)-(11).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬಾಲಿವುಡ್ ಸೂಪರ್ ಜೋಡಿ ಕಪಲ್ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಹೆಣ್ಣು ಮಗುವನ್ನು ಬರಮಾಡಿ...Read more" } ", "keywords": "Kiara Advani gives birth to baby girl, Sidharth Malhotra and Kiara Advani parenthood, Bollywood couple welcomes daughter, Kiara Advani baby news, Sidharth Malhotra fatherhood", "url": "https://dashboard.publicnext.com/node" }
ಬಾಲಿವುಡ್ ಸೂಪರ್ ಜೋಡಿ ಕಪಲ್ ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಪೋಷಕರಾಗಿ ಬಡ್ತಿ ಪಡೆದಿದ್ದಾರೆ. ಹೆಣ್ಣು ಮಗುವನ್ನು ಬರಮಾಡಿಕೊಂಡ ದಂಪತಿ ಖುಷಿಯಲ್ಲಿದ್ದಾರೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ನಟಿಗೆ ಆಗಸ್ಟ್‌ನಲ್ಲಿ ಮಗು ಜನಿಸಬೇಕಿತ್ತು. ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕಳೆದ ವಾರ, ಸಿದ್ಧಾರ್ಥ್ ಮತ್ತು ಕಿಯಾರಾ ಮುಂಬೈನ ಕ್ಲಿನಿಕ್ ಒಂದರಲ್ಲಿ ಕಾಣಿಸಿಕೊಂಡಿದ್ದರು. ಸಿದ್ಧಾರ್ಥ್ ಅವರ ತಾಯಿ ರಿಮ್ಮಾ ಮಲ್ಹೋತ್ರಾ ಮತ್ತು ಕಿಯಾರಾ ಅವರ ಪೋಷಕರು ಜೆನೆವೀವ್ ಮತ್ತು ಜಗದೀಪ್ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಯಲ್ಲಿದ್ದಾರೆ.
ಕಿಯಾರಾ ಪ್ರೆಗ್ನೆನ್ಸಿ ಘೋಷಿಸಿದಾಗಿನಿಂದ, ಕಿಯಾರಾ ಮತ್ತು ಸಿದ್ಧಾರ್ಥ್ ಸೋಷಿಯಲ್ ಮೀಡಿಯಾದಲ್ಲಿ ಅಷ್ಟೇನು ಆಕ್ಟೀವ್ ಆಗಿರಲಿಲ್ಲ. ಫೆಬ್ರವರಿ 28 ರಂದು, ಸಿದ್ಧಾರ್ಥ್ ಮತ್ತು ಕಿಯಾರಾ ಇನ್ಸ್ಟಾಗ್ರಾಮ್‌ನಲ್ಲಿ ‘ನಮ್ಮ ಜೀವನದ ಶ್ರೇಷ್ಠ ಉಡುಗೊರೆ ಶೀಘ್ರದಲ್ಲೇ ಬರಲಿದೆ’ ಎಂದು ಪೋಸ್ಟ್ ಮಾಡಿದ್ದರು.
PublicNext
16/07/2025 01:30 pm