ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: "ಜೋಗ ಜಲಪಾತ ವೀಕ್ಷಣೆಗೆ ವಿಶೇಷ ಬಸ್ ವ್ಯವಸ್ಥೆ' - ವಾ.ಕ.ರಾ.ರ.ಸಾ.ಸಂಸ್ಥೆಯ ಕಾರ್ಯಾಚರಣೆ..!

ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ವಿಶ್ವವಿಖ್ಯಾತ ಪ್ರವಾಸಿ ತಾಣ ಜೋಗ ಜಲಪಾತದ ವೀಕ್ಷಣೆಗೆ ರವಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚೆಗೆ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿಗಳು, ಜಲಪಾತಗಳು ತುಂಬಿ ಹರಿಯುತ್ತಿವೆ. ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಕೊಂಡಿದೆ. ಮಳೆ ಮೋಡಗಳ ನಡುವೆ ಕಣ್ಣಾಮುಚ್ಚಾಲೆ ಆಡುವ ಸುತ್ತಲಿನ ಪ್ರಕೃತಿ ಸೌಂದರ್ಯ ಅನನ್ಯ. ಕಣ್ಮನ ಸೆಳೆಯುವ ಜಲಪಾತದ ದೃಶ್ಯ ವೈಭವ ಸವಿಯಲು ಇದು ಅತ್ಯಂತ ಸೂಕ್ತ ಕಾಲ.

ಸಾರ್ವಜನಿಕರ ಬೇಡಿಕೆಯ ಮೇರೆಗೆ ಜೋಗ ಜಲಪಾತ ವೀಕ್ಷಿಸಲು ಕುಟುಂಬದವರೊಂದಿಗೆ ಹೋಗಿ ಬರಲು ಅನುಕೂಲವಾಗುವಂತೆ 2ನೇ ಮತ್ತು 4ನೇ ಶನಿವಾರ, ರವಿವಾರ ಹಾಗೂ ಸಾರ್ವಜನಿಕ ರಜಾ ದಿನಗಳಂದು ಹುಬ್ಬಳ್ಳಿಯ ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹೋಗುವಾಗ ಶಿರಸಿ ಮಾರಿಕಾಂಬ ದೇವಸ್ಥಾನದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೋಗದಲ್ಲಿ ಜಲಪಾತ ವೀಕ್ಷಣೆಗೆ ಹಾಗೂ ಪ್ರಕೃತಿ ಸೌಂದರ್ಯ ಸೊಬಗು ಆನಂದಿಸಲು ಸಾಕಷ್ಟು ಸಮಯಾವಕಾಶ ಕಲ್ಪಿಸಲಾಗಿದೆ.

ವಿಭಿನ್ನ ಪ್ರಯಾಣಿಕರ ಅಭಿರುಚಿಕೆ ತಕ್ಕಂತೆ ಮಲ್ಟಿ ಅಕ್ಸೆಲ್ ವೋಲ್ವೋ ಎಸಿ, ರಾಜಹಂಸ ಹಾಗೂ ವೇಗದೂತ ಮಾದರಿಯ ವಿಶೇಷ ಬಸ್ಸುಗಳ ಆಯ್ಕೆಗೆ ಅವಕಾಶವಿದೆ. ವೋಲ್ವೊ ಎಸಿ ಬಸ್‌ ಹುಬ್ಬಳ್ಳಿಯಿಂದ ಬೆಳಿಗ್ಗೆ 8-00ಕ್ಕೆ ಹೊರಡುತ್ತದೆ. ಮಧ್ಯಾಹ್ನ12-30ಕ್ಕೆ ಜೋಗ ಜಲಪಾತ ತಲುತ್ತದೆ. ಜೋಗ ಜಲಪಾತದಿಂದ ಸಂಜೆ 5-00ಕ್ಕೆ ಹೊಡುತ್ತದೆ. ಹುಬ್ಬಳ್ಳಿಗೆ ರಾತ್ರಿ 9-00ಕ್ಕೆ ಆಗಮಿಸುತ್ತದೆ. ಪ್ರಯಾಣ ದರ ರೂ‌. 700 ನಿಗದಿಪಡಿಸಲಾಗಿದೆ.

ಹುಬ್ಬಳ್ಳಿಯಿಂದ ಬೆಳಿಗ್ಗೆ 7-30ಕ್ಕೆ ಹೊರಡುತ್ತದೆ. ಮಧ್ಯಾಹ್ನ12-30ಕ್ಕೆ ಜೋಗ ಜಲಪಾತ ತಲುತ್ತದೆ. ಜೋಗ ಜಲಪಾತದಿಂದ ಸಂಜೆ 4-30ಕ್ಕೆ ಹೊಡುತ್ತದೆ. ಹುಬ್ಬಳ್ಳಿಗೆ ರಾತ್ರಿ 9-00ಕ್ಕೆ ಆಗಮಿಸುತ್ತದೆ. ಪ್ರಯಾಣ ದರ ರೂ‌. 600 ನಿಗದಿಪಡಿಸಲಾಗಿದೆ. ವೇಗದೂತ ಬಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 7-30ಕ್ಕೆ ಹೊರಡುತ್ತದೆ.12-30ಕ್ಕೆ ಜೋಗ ಜಲಪಾತ ತಲುತ್ತದೆ.

ಜೋಗ ಜಲಪಾತದಿಂದ ಸಂಜೆ 4-30ಕ್ಕೆ ಹೊಡುತ್ತದೆ. ಹುಬ್ಬಳ್ಳಿಗೆ ರಾತ್ರಿ 9-00ಕ್ಕೆ ಆಗಮಿಸುತ್ತದೆ. ಪ್ರಯಾಣ ದರ ರೂ‌. 500 ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 7760991674 ಅಥವಾ 7760991682ರಲ್ಲಿ ಸಂಪರ್ಕಿಸಬಹುದಾಗಿದೆ.

Edited By : Suman K
Kshetra Samachara

Kshetra Samachara

16/07/2025 03:09 pm

Cinque Terre

23.67 K

Cinque Terre

5

ಸಂಬಂಧಿತ ಸುದ್ದಿ