ಮೈಸೂರು : ಈ ಬಾರಿ ಶ್ರೀಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವನ್ನು ಜುಲೈ 17 ರಂದು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುವುದು.
ನಾಳೆ ಬೆಳಗ್ಗೆ 4 ಗಂಟೆಯಿಂದ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಳ್ಳುತ್ತವೆ. ದೇವಿಯ ಮೂರ್ತಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಗುತ್ತದೆ. ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಸಹ ಇರುತ್ತದೆ.
PublicNext
16/07/2025 05:18 pm