", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1752671315-Untitled-design---2025-07-16T184222.213.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರ...Read more" } ", "keywords": "Bengaluru, leadership change, high command decision, CM compliance, party directive. ", "url": "https://dashboard.publicnext.com/node" }
ಬೆಂಗಳೂರು: "ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಅನುಸರಿಸುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಇತರ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆಯ ಮುಕ್ತಾಯದ ಬಳಿಕ ನಡೆದ ಸುದ್ದಿಗೋಷ್ಠಿಯ ವೇಳೆ ಎದುರಾದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದು ಹೀಗೆ.
"ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ವದಂತಿ ಜೋರಾಗಿದೆಯಲ್ಲವೇ?' ಎಂದು ಸುದ್ದಿಗಾರರು ಕೇಳಿದಾಗ, 'ಈ ಪ್ರಶ್ನೆ ಇಲ್ಲಿ ಅಪ್ರಸ್ತುತ. ಈ ಸಭೆಗೆ ಸಂಬಂಧಿಸಿದ್ದಲ್ಲ' ಎಂದು ಸಿದ್ದರಾಮಯ್ಯ ಹೇಳಿದರು.
"ನೀವು ಕೇಳುವ ಪ್ರಶ್ನೆಯ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಪಾಲಿಸುತ್ತೇವೆ' ಎಂದರು.
PublicNext
16/07/2025 06:46 pm