ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಸದಸ್ಯರಾದ ಬಳಿಕ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆದ ಎಐಸಿಸಿ ಒಬಿಸಿ ಮೊದಲ ಸಭೆಯಲ್ಲಿ ತೆಗೆದುಕೊಂಡ ಮೂರು ಪ್ರಮುಖ ನಿರ್ಣಯಗಳನ್ನು ಸ್ವಾಗತಿಸುವುದಾಗಿ ರಾಮಮನೋಹರ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ ಮಳವಳ್ಳಿ ಅವರು ಹೇಳಿದರು. ಪಬ್ಲಿಕ್ ನೆಕ್ಸ್ಟ್ ನೊಂದಿಗೆ ಮಾತನಾಡಿದ ಅವರು, ಸಂವಿಧಾನದ ಅನುಚ್ಛೇದ15(5)ರ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ನೀಡಬೇಕೆಂಬುದು ನಮ್ಮೆಲ್ಲರ ಒತ್ತಾಯ ಕೂಡ ಎಂದರು.
PublicNext
16/07/2025 09:56 pm