ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇರಾಕ್‌ನ 5 ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಭೀಕರ ಅಗ್ನಿ ದುರಂತ – 50 ಜನರ ದುರ್ಮರಣ

ಬಾಗ್ದಾದ್: ಪೂರ್ವ ಇರಾಕ್‌ನ ಅಲ್-ಕುಟ್ ನಗರದ 5 ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಪ್ರಾಂತ್ಯದ ಗವರ್ನರ್ ನೀಡಿದ ಮಾಹಿತಿಯಂತೆ, ಈ ದುರಂತದಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿಯಿಡೀ ಕಟ್ಟಡವನ್ನು ಆವರಿಸಿಕೊಂಡಿದ್ದ ಬೆಂಕಿಯ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ವಿಡಿಯೋಗಳಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ನಡೆಸಿದ ಪ್ರಯತ್ನಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.

ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕಟ್ಟಡ ಹಾಗೂ ಹೈಪರ್‌ಮಾರ್ಕೆಟ್ ಮಾಲೀಕರ ವಿರುದ್ಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Edited By :
PublicNext

PublicNext

17/07/2025 01:39 pm

Cinque Terre

34.59 K

Cinque Terre

0

ಸಂಬಂಧಿತ ಸುದ್ದಿ