", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/222042-1752742477-WhatsApp-Image-2025-07-17-at-1.40.10-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಆಯೋಜಿಸಿದ್ದ ಸ್ವಚ್ಛ ಸರ್ವೇಕ್ಷಣ 2024-25 ಪ್ರಶಸ್ತಿಗಳಲ್ಲಿ ಇಂದೋರ್ ಸತತ ಎಂಟನೇ ಬಾರಿಗೆ ಭ...Read more" } ", "keywords": "Cleanest cities in India, Indore top rank, Swachh Survekshan awards, Indian city cleanliness rankings, urban sanitation initiatives, ", "url": "https://dashboard.publicnext.com/node" }
ನವದೆಹಲಿ: ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಆಯೋಜಿಸಿದ್ದ ಸ್ವಚ್ಛ ಸರ್ವೇಕ್ಷಣ 2024-25 ಪ್ರಶಸ್ತಿಗಳಲ್ಲಿ ಇಂದೋರ್ ಸತತ ಎಂಟನೇ ಬಾರಿಗೆ ಭಾರತದ ಅತ್ಯಂತ ಸ್ವಚ್ಛ ನಗರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಛತ್ತೀಸಗಢದ ಅಂಬಿಕಾಪುರ, ಕರ್ನಾಟಕದ ಮೈಸೂರು ನಂತರದ ಸ್ಥಾನಗಳಲ್ಲಿವೆ.
ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 2024–25ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಯನ್ನು ಗುರುವಾರ ಘೋಷಣೆ ಮಾಡಿದೆ. 3 ಲಕ್ಷದಿಂದ 10 ಲಕ್ಷ ಜನಸಂಖ್ಯೆಯ ದೇಶದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಗುಜರಾತ್‌ನ ಅಹಮದಾಬಾದ್, ಛತ್ತೀಸಗಢದ ರಾಯಪುರ, ಮಹಾರಾಷ್ಟ್ರದ ನವಿ ಮುಂಬೈ, ಗುಜರಾತ್‌ನ ಸೂರತ್ ಸ್ಥಾನ ಪಡೆದಿವೆ.
ನವದೆಹಲಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಸ್ವಚ್ಛ ನಗರ’ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಕೇಂದ್ರ ಸಚಿವ ಮನೋಹರ್ ಲಾಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
PublicNext
17/07/2025 02:24 pm