", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1752744457-Untitled-design---2025-07-17T150132.426.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆಯವರನ್ನ ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಲಿ ಎಂದು ನಿನ್ನೆ ವಿಜಯೇಂದ್ರ ಸವಾಲು ಹಾಕಿದ್ರು. ವಿಜಯೇಂದ್ರ ಸವಾಲಿಗೆ...Read more" } ", "keywords": "Bengaluru, BJP state president post, Dalit leader, Vijayendra, CM counter. ", "url": "https://dashboard.publicnext.com/node" } ಬೆಂಗಳೂರು : "ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ದಲಿತ ನಾಯಕರಿಗೆ ಬಿಟ್ಟುಕೊಡಲಿ' - ವಿಜಯೇಂದ್ರಗೆ ಸಿಎಂ ತಿರುಗೇಟು!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : "ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ದಲಿತ ನಾಯಕರಿಗೆ ಬಿಟ್ಟುಕೊಡಲಿ' - ವಿಜಯೇಂದ್ರಗೆ ಸಿಎಂ ತಿರುಗೇಟು!

ಬೆಂಗಳೂರು : ಮಲ್ಲಿಕಾರ್ಜುನ ಖರ್ಗೆಯವರನ್ನ ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಲಿ ಎಂದು ನಿನ್ನೆ ವಿಜಯೇಂದ್ರ ಸವಾಲು ಹಾಕಿದ್ರು. ವಿಜಯೇಂದ್ರ ಸವಾಲಿಗೆ ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ದಲಿತ ನಾಯಕರಿಗೆ ಬಿಟ್ಟುಕೊಡಲಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ.

ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ.

ದಲಿತ ನಾಯಕ ಗೋವಿಂದಪ್ಪ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ.

ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬೇಡಿ.

ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ.

ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ?ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ.

ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ.

ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ. ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ.

ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ.

ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದಿದ್ದಾರೆ.

Edited By : Abhishek Kamoji
PublicNext

PublicNext

17/07/2025 02:57 pm

Cinque Terre

57.1 K

Cinque Terre

2

ಸಂಬಂಧಿತ ಸುದ್ದಿ