ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಸುರಿದು ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ದುರ್ಘಟನೆ ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಮಾರ್ಗದಲ್ಲಿ ಸಂಭವಿಸಿದ್ದು, ನೀರಿನ ಹರಿವಿನೊಂದಿಗೆ ಬಂಡೆಗಳು ಉರುಳಿ ಬಂದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾಳೆ. ಇನ್ನೂ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಮಣ್ಣಿನ ಕುಸಿತವಾಗುತ್ತಿದ್ದಾಗ, ಯಾತ್ರಿಕರಲ್ಲಿ ಭೀತಿ ಉಂಟಾಗಿ ಎಲ್ಲರೂ ಓಡಿಹೋಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ಇಬ್ಬರು ಯಾತ್ರಿಗಳು ಸ್ಥಳದಲ್ಲೇ ಸಿಲುಕಿರುವುದು ಕಂಡು ಬಂದಿದ್ದು, ಅವರನ್ನು ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ರಕ್ಷಿಸಿದ್ದಾರೆ.
ಗುಡ್ಡ ಕುಸಿತದ ಸಮಯದಲ್ಲಿ ಅನೇಕ ಯಾತ್ರಿಕರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡು ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.
PublicNext
17/07/2025 04:17 pm