", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/52563-1752750412-WhatsApp-Image-2025-07-17-at-3.57.04-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪಟನಾ : ಬಿಹಾರದ ರಾಜಾ ಬಜಾರ್ ಪ್ರದೇಶದಲ್ಲಿನ ಪಟನಾದ ಖಾಸಗಿ ಆಸ್ಪತ್ರೆಯೊಳಗೆ ಪೆರೋಲ್ ಮೇಲೆ ಹೊರಬಂದ ಕೈದಿಯೊಬ್ಬನ ಮೇಲೆ ನಾಲ್ವರು ದುಷ್ಕರ್ಮಿಗಳು ...Read more" } ", "keywords": ""ICU shootout, rowdy sheeter killed, viral video, hospital violence, crime news, police investigation", "url": "https://dashboard.publicnext.com/node" }
ಪಟನಾ : ಬಿಹಾರದ ರಾಜಾ ಬಜಾರ್ ಪ್ರದೇಶದಲ್ಲಿನ ಪಟನಾದ ಖಾಸಗಿ ಆಸ್ಪತ್ರೆಯೊಳಗೆ ಪೆರೋಲ್ ಮೇಲೆ ಹೊರಬಂದ ಕೈದಿಯೊಬ್ಬನ ಮೇಲೆ ನಾಲ್ವರು ದುಷ್ಕರ್ಮಿಗಳು ಮನಬಂದಂತೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ.
ಇನ್ನೂ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರ ಪ್ರಕಾರ, ಶಾಸ್ತ್ರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಬಕ್ಸಾರ್ ಜಿಲ್ಲೆಯ ನಿವಾಸಿ ಚಂದನ್ ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಒಬ್ಬ ಅಪರಾಧಿಯಾಗಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇವೂರ್ ಜೈಲಿನಲ್ಲಿ ಬಂಧಿಸಲ್ಪಟ್ಟಿದ್ದ. ಮಿಶ್ರಾ ಪರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ದುಷ್ಕರ್ಮಿಗಳು ಆಸ್ಪತ್ರೆ ಕೊಠಡಿ ಸಂಖ್ಯೆ 209 ಕ್ಕೆ ನುಗ್ಗಿ ಗುಂಡು ಹಾರಿಸಿದ್ದಾರೆ.
ಈ ಘಟನೆಯಿಂದ ಆಸ್ಪತ್ರೆಯಲ್ಲಿದ್ದವರು ಶಾಕ್ ಆಗಿದ್ದಾರೆ. ಗುಂಡಿನ ದಾಳಿಯ ನಂತರ, ಪಾಟ್ನಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗುಂಡು ತಗುಲಿದ ಕಾರಣ ಅಪರಾಧಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಿಸಿಟಿವಿ ದೃಶ್ಯಗಳಲ್ಲಿ ಶೂಟರ್‌ನ ಮುಖಗಳು ಸೆರೆಯಾಗಿವೆ ಶೀಘ್ರದಲ್ಲೇ ಪೊಲೀಸರು ಅಪರಾಧಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
PublicNext
17/07/2025 05:18 pm