", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/454738-1752759315-New-(1280-x-720-px)-(1280-x-720-px)-(30).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SrinivasCrimeBng" }, "editor": { "@type": "Person", "name": "Harish.K" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ನೇಮಕಾತಿ ಹಗರಣ ಮತ್ತೆ ಸದ್ದು ಮಾಡುತ್ತಿದೆ. ಅಕ್ರಮ ಹಣ ವ...Read more" } ", "keywords": "Congress MLA KY Nanje Gowda ED Investigation ₹1.32 Crore Assets Seized by ED from Nanje Gowda", "url": "https://dashboard.publicnext.com/node" } ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್, ಇ.ಡಿಯಿಂದ ₹1.32 ಕೋಟಿ ಆಸ್ತಿ ಮುಟ್ಟುಗೋಲು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್, ಇ.ಡಿಯಿಂದ ₹1.32 ಕೋಟಿ ಆಸ್ತಿ ಮುಟ್ಟುಗೋಲು

ಬೆಂಗಳೂರು : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ನೇಮಕಾತಿ ಹಗರಣ ಮತ್ತೆ ಸದ್ದು ಮಾಡುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬೆಂಗಳೂರು ವಲಯ ಕಚೇರಿಯ ಇಡಿ ಅಧಿಕಾರಿಗಳು ಕಳೆದ ವಾರ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಮತ್ತು ಇತರರ ಮೇಲೆ ದಾಳಿ ಮಾಡಿತ್ತು. ಆ ದಾಳಿಯಲ್ಲಿ 1.32 ಕೋಟಿ ಮೌಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ಹೇಳಿದೆ.

ಕೋಮುಲ್‌ ನಿರ್ದೇಶಕ ನಂಜೇಗೌಡರು ನೇಮಕಾತಿಯಲ್ಲಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಸುಮಾರು 75 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ. ಮಂಗಳೂರು ಯೂನಿವರ್ಸಿಟಿಯ ಸಿಬ್ಬಂದಿ ಜೊತೆಗೆ ಅವ್ಯವಹಾರ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ರಾಜಕಾರಣಿಗಳ ಶಿಫಾರಸು ಪತ್ರ ನೀಡಲಾಗಿತ್ತು. ಇ.ಡಿ ದಾಳಿ ವೇಳೆ ಶಿಫಾರಸು ಪತ್ರ ಸಮೇತ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದರು.

ಈ ಸಂಬಂಧ 2024ರಲ್ಲಿ ಜನವರಿಯಲ್ಲಿ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಶಾಸಕರ ನಿವಾಸ, ಆಪ್ತ ಸಹಾಯಕ ಹರೀಶ್ ನಿವಾಸ ಹಾಗೂ ಕೋಚಿಮುಲ್ ಕಚೇರಿ ಸೇರಿದಂತೆ 10 ಕಡೆಗಳಲ್ಲಿ ಇ.ಡಿ.ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು.

Edited By :
PublicNext

PublicNext

17/07/2025 07:06 pm

Cinque Terre

29.6 K

Cinque Terre

1

ಸಂಬಂಧಿತ ಸುದ್ದಿ