ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿಜಯೇಂದ್ರ ರಾಜ್ಯಾಧ್ಯಕ್ಷನಾದ್ರೆ ಹೊಸ ಪಕ್ಷ ಕಟ್ಟುತ್ತೇವೆ ಎಂದ ಯತ್ನಾಳ್

ಬೆಂಗಳೂರು : ರಾಜ್ಯ ಬಿಜೆಪಿಗೆ ಶೀಘ್ರದಲ್ಲೇ ಅಧಿಕೃತ ರಾಜ್ಯಾಧ್ಯಕ್ಷರನ್ನ ಘೋಷಣೆ ಮಾಡಲಾಗುತ್ತೆ ಹಾಲಿ ಇರುವ ಬಿ. ವೈ ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷರನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದ್ರ ನಡುವೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಹೊಸ ಪಕ್ಷ ಕಟ್ಟುತ್ತೇವೆ ಅದರಲ್ಲಿ ಯಾವುದೇ ಸಂಶಯ ಬೇಡ ಎಂದಿದ್ದಾರೆ.

ಹಿಂದುತ್ವ ಮತ್ತು ಅಭಿವೃದ್ಧಿ ಆಧಾರದ ಮೇಲೆ ಹೊಸ ಪಕ್ಷ ಕಟ್ಟುತ್ತೇವೆ, ನಮ್ಮ ಹೊಸ ಪಕ್ಷಕ್ಕೆ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಬರ್ತಾರೆ ಎಂದು ಹೇಳುವ ಮೂಲಕ ಬಿಎಸ್‌ವೈ ಕುಟುಂಬದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಎಸ್‌ವೈ ಮತ್ತು ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆಗಳನ್ನ ನೀಡುತ್ತಿದ್ದರಿಂದಲ್ಲೇ ಯತ್ನಾಳ್‌ರನ್ನ ಬಿಜೆಪಿಯಿಂದ ಉಚ್ಚಾಟಿಸಲಾಗಿತ್ತು‌. ಇದೀಗ ಉಚ್ಚಾಟನೆ ನಂತರವೂ ಬಿಎಸ್‌ವೈ ವಿರುದ್ಧ ಮಾತನಾಡುತ್ತಿದ್ದಾರೆ. ವಿಜಯೇಂದ್ರರರನ್ನ ಬಿಜೆಪಿ ರಾಜ್ಯಾಧ್ಯಕ್ಷ ಮಾಡಿದ್ರೆ ಹೊಸ ಪಕ್ಷ ಕೊಟ್ಟೋದಾಗಿ ಹೇಳಿದ್ದಾರೆ.

Edited By : Manjunath H D
PublicNext

PublicNext

17/07/2025 08:26 pm

Cinque Terre

23.17 K

Cinque Terre

3

ಸಂಬಂಧಿತ ಸುದ್ದಿ