", "articleSection": "Law and Order", "image": { "@type": "ImageObject", "url": "https://prod.cdn.publicnext.com/s3fs-public/52563-1752765738-_(1280-x-720-px)-(15).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : 2003ರಲ್ಲಿ ಭಾವಿ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ...Read more" } ", "keywords": "Techie murder case, Supreme Court verdict, Karnataka High Court, Shubha, Arun Verma, Girish murder, Life imprisonment upheld, Pardon plea", "url": "https://dashboard.publicnext.com/node" } ಭಾವಿ ಪತ್ನಿಯಿಂದ ಬೆಂಗಳೂರಿನ ಟೆಕ್ಕಿ ಹತ್ಯೆ : ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾವಿ ಪತ್ನಿಯಿಂದ ಬೆಂಗಳೂರಿನ ಟೆಕ್ಕಿ ಹತ್ಯೆ : ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ : 2003ರಲ್ಲಿ ಭಾವಿ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಕಾಯಂಗೊಳಿಸಿ ಸುಪ್ರಿಂ ಕೋರ್ಟ್‌ ಸೋಮವಾರ ಅಂತಿಮ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್‌ ಮತ್ತು ಅರವಿಂದ್ ಕುಮಾರ್ ಅವರ ಪೀಠವು, 'ಶುಭಾ ತನ್ನ ಕಾಲೇಜು ಗೆಳೆಯ ಮತ್ತು ಇತರ ಇಬ್ಬರೊಂದಿಗೆ ಸೇರಿ ಕೊಲೆಗೆ ಸಂಚು ರೂಪಿಸಿದ್ದರು' ಎಂದು ತೀರ್ಪಿನಲ್ಲಿ ಹೇಳಿತು.

ಹೈಕೋರ್ಟ್ ತೀರ್ಪಿನ ವಿರುದ್ಧ ಅಪರಾಧಿಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳನ್ನು ಪೀಠ ವಜಾಗೊಳಿಸಿತು. ಅಪರಾಧಕ್ಕೆ ಕಾರಣವಾದ ಭಾವನಾತ್ಮಕ ಮತ್ತು ಸಾಮಾಜಿಕ ಮೌಲ್ಯದ ಕುಸಿತದ ಬಗ್ಗೆ ಪೀಠವು ತೀವ್ರ ಕಳವಳ ವ್ಯಕ್ತಪಡಿಸಿತು.

ಪ್ರಕರಣ ಸಂಬಂಧ ತಮಗೆ ಜೀವಾವಧಿ ಶಿಕ್ಷೆ ವಿಧಿಸಿ 2010ರಲ್ಲಿ ಅಧೀನ ನ್ಯಾಯಾಲಯ ಮತ್ತು 2011ರಲ್ಲಿ ಹೈಕೋರ್ಟ್‌ ಹೊರಡಿಸಿದ್ದ ತೀರ್ಪು ರದ್ದುಪಡಿಸಬೇಕು ಮತ್ತು ತಮ್ಮನ್ನು ಖುಲಾಸೆಗೊಳಿಸಬೇಕು ಎಂದು ಕೋರಿ ಆರೋಪಿಗಳಾದ ಡಿ.ಅರುಣ್‌ ವರ್ಮಾ (ಎ-1). ಎ.ವೆಂಕಟೇಶ್‌ (ಎ-2), ದಿನೇಶ್‌ (ಎ-3) ಮತ್ತು ಶುಭಾ (ಎ-2) ಸುಪ್ರೀಂ ಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದರು.

ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್‌ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್‌ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ ಎಂದು ಸುಪ್ರಿಂ ಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ.

ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಸೆಷನ್ಸ್‌ ನ್ಯಾಯಾಲಯವು ನಾಲ್ವರಿಗೆ ಶಿಕ್ಷೆ ವಿಧಿಸಿತ್ತು. ಈ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು.

ಇಂಟೆಲ್ ಸಂಸ್ಥೆಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಗಿರೀಶ್ ಹಾಗೂ ಕಾನೂನು ವಿದ್ಯಾರ್ಥಿನಿಯಾಗಿದ್ದ ಶುಭಾ ನಿಶ್ಚಿತಾರ್ಥವು 2003ರ ನವೆಂಬರ್‌ನಲ್ಲಿ ನಡೆದಿತ್ತು. ಅವರ ವಿವಾಹವು ಐದು ತಿಂಗಳಲ್ಲಿ ನಡೆಯಬೇಕಿತ್ತು. ಕಾನೂನು ಕಾಲೇಜಿನಲ್ಲಿ ತಮ್ಮ ಜೂನಿಯರ್ ಆಗಿದ್ದ ಅರುಣ್‌ನನ್ನು ಶುಭಾ ಪ್ರೀತಿಸುತ್ತಿದ್ದಳು. ಈ ಇಬ್ಬರೂ ಸಹಚರರ ಜತೆಗೂಡಿ ಕೊಲೆ ಮಾಡಿದ್ದಾರೆಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

'ಒಬ್ಬ ಮುಗ್ಧ ಯುವಕ ಜೀವ ಕಳೆದುಕೊಳ್ಳಲು ಕಾರಣವಾದ ಆಕೆಯ ಕೃತ್ಯವನ್ನು ನಾವು ಕ್ಷಮಿಸಲು ಸಾಧ್ಯವಿಲ್ಲ. ತನ್ನ ಸಮಸ್ಯೆ ಬಗೆಹರಿಸಿಕೊಳ್ಳಲು ಆಕೆ ತಪ್ಪು ಕೃತ್ಯ ಎಸಗಿದ್ದಾಳೆ. ಅಪರಾಧ ಸಂಭವಿಸಿ ಎರಡು ದಶಕಗಳು ಕಳೆದಿವೆ. ಘಟನೆಯ ಸಮಯದಲ್ಲಿ ನಾಲ್ವರು ಅಪರಾಧಿಗಳ ಪೈಕಿ ಇಬ್ಬರು ಹದಿಹರೆಯದವರು ಆಗಿದ್ದರು. ನ್ಯಾಯಾಲಯವು ಈ ವಿಷಯವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ಬಯಸುತ್ತದೆ. ಆಕೆಗೆ ಹೊಸ ಜೀವನ ನಡೆಸಲು ಅವಕಾಶ ನೀಡುವ ಸಲುವಾಗಿ ಮಾತ್ರ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ' ಎಂದು ಪೀಠದ ಪರವಾಗಿ ನ್ಯಾಯಮೂರ್ತಿ ಸುಂದರೇಶ್ ಅವರು 132 ಪುಟಗಳ ತೀರ್ಪಿನಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

17/07/2025 08:52 pm

Cinque Terre

37.31 K

Cinque Terre

0

ಸಂಬಂಧಿತ ಸುದ್ದಿ