ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜಾಲಿ ಮೂಡ್‌ನಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಟ್ಟಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.
ಜು.22ರಂದು ಅಂತಿಮ ವಿಚಾರಣೆ ನಡೆಸಿ ಆದೇಶ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದ್ದು ಅಂದು ದರ್ಶನ ಪವಿತ್ರಾಗೌಡ ಸೇರಿ ಏಳು ಮಂದಿಯ ಭವಿಷ್ಯ ನಿರ್ಧಾರವಾಗಲಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ, ಜಾಮೀನು ಪಡೆದು ಸದ್ಯ ಶೂಟಿಂಗ್‌ಗಾಗಿ ವಿದೇಶಿ ಪ್ರವಾಸ ಅಂತಾ ಬ್ಯುಸಿಯಾಗಿರುವ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ಕೊಡುವ ಸಾಧ್ಯತೆ ಇದೆ.
ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾ.ಪರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠ ಹೈಕೋರ್ಟ್ ಆದೇಶದ ಬಗ್ಗೆ ಭಿನ್ನಾಭಿಪ್ರಾಯಗಳನ್ನ ವ್ಯಕ್ತಪಡಿಸಿದೆ.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾ. ಪರ್ದಿವಾಲಾ. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಹೈಕೋರ್ಟ್ ಆದೇಶವನ್ನ ಹೇಗೆ ನೀಡಿದೆ ಅನ್ನೋದನ್ನ ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಹೇಳಿದ ನ್ಯಾಯಾಲಯ ಕೇಳಿತು.
ಇದಕ್ಕೆ ಪ್ರತಿಯಾಗಿ ದರ್ಶನ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾಗಿದ್ದರು. ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾ. ಪರ್ದಿವಾಲಾ ಮಂಗಳವಾರ ಅಂತಿಮವಾದ ಮಂಡಿಸಿ, ಅಂದೇ ತೀರ್ಪು ನೀಡಲಾಗುವುದು ಎಂದು ಹೇಳಿದರು.
PublicNext
17/07/2025 09:12 pm