ಕೋಲ್ಕತ್ತಾ: ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನಾ ಜಹಾನ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೂರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹಸಿನಾ ಮತ್ತು ಅರ್ಷಿ ವಿರುದ್ಧ ಐಪಿಸಿ ಸೆಕ್ಷನ್ 126(2), 115(2), 117(2), 109, 351(3), 3(5) ໖ ದಾಖಲಿಸಲಾಗಿದೆ.
ವಿವಾದಿತ ಜಮೀನಿನ ವಿಚಾರದಲ್ಲಿ ಹಸಿನಾ ಮತ್ತು ಅರ್ಷಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಲಿಯಾ ಖತೂನ್ ಎಂಬ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಸೂರಿ ಪಟ್ಟಣದ ವಾರ್ಡ್ ಸಂಖ್ಯೆ 5 ರಲ್ಲಿ ವಾಸವಿರುವ ಹಸಿನಾ ತಮ್ಮ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಮನೆ ನಿರ್ಮಿಸಲು ಪ್ರಾರಂಭಿಸಿದರು. ಆ ನಿವೇಶನವನ್ನು ಅರ್ಷಿ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಪಕ್ಕದಲ್ಲೇ ವಾಸಿಸುವ ಡಾಲಿಯಾ ಖತೂನ್, ಆ ಭೂಮಿ ತನ್ನದು ಎಂದು ಹೇಳಿಕೊಂಡು ಮುಂದೆ ಬಂದಿದ್ದಾರೆ. ಇದೇ ವಿಚಾರಕ್ಕೆ ಜಗಳವಾಗಿದೆ.
PublicNext
18/07/2025 06:52 am