", "articleSection": "Law and Order,Government,International", "image": { "@type": "ImageObject", "url": "https://prod.cdn.publicnext.com/s3fs-public/387839-1752833128-Untitled-design---2025-07-18T153925.604.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಾಷಿಂಗ್ಟನ್: ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ...Read more" } ", "keywords": "Pahalgam attack, TRF terrorist organization, US sanctions, banned terrorist group, Kashmir attack, global terrorism. ", "url": "https://dashboard.publicnext.com/node" }
ವಾಷಿಂಗ್ಟನ್: ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಗೆ ಹೊಣೆ ಹೊತ್ತಿದ್ದ ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯನ್ನು ಅಮೆರಿಕದ ವಿದೇಶಾಂಗ ಇಲಾಖೆ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಿದೆ.
ಈ ದಾಳಿಯಲ್ಲಿ 26 ನಾಗರಿಕರು ದುರ್ಮರಣಕ್ಕೀಡಾಗಿದ್ರು. ದಾಳಿಯ ಜವಾಬ್ದಾರಿಯನ್ನು ಟಿಆರ್‌ಎಫ್ ತನ್ನದಾಗಿ ಘೋಷಿಸಿದ್ದ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೊ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.
"ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಅನ್ನು ಇಂದು ಅಮೆರಿಕ ವಿದೇಶಾಂಗ ಇಲಾಖೆ ವಿದೇಶಿ ಭಯೋತ್ಪಾದಕ ಸಂಘಟನೆ ಹಾಗೂ ವಿಶೇಷವಾಗಿ ಗುರುತಿಸಲಾದ ಜಾಗತಿಕ ಭಯೋತ್ಪಾದಕ ಆಗಿ ಘೋಷಿಸಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಲಷ್ಕರ್-ಎ-ತಯ್ಯಿಬಾ (LeT) ನ ಸಹಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಟಿಆರ್‌ಎಫ್, ಭಾರತದಲ್ಲಿ ಹಲವು ಭಯೋತ್ಪಾದಕ ದಾಳಿಗಳನ್ನು ನಡೆಸಿರುವ ಹಿನ್ನೆಲೆ ಇದೆ. 2008ರ ಮುಂಬೈ ದಾಳಿಯ ನಂತರ ಭಾರತದಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಮಾರಣಾಂತಿಕ ದಾಳಿಯಾಗಿ ಪಹಲ್ಗಾಮ್ ಘಟನೆ ಪರಿಗಣಿಸಲಾಗಿದೆ.
PublicNext
18/07/2025 03:35 pm