ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ “ಕರ್ನಾಟಕ ರತ್ನ” ಪ್ರಶಸ್ತಿ ನೀಡಬೇಕು ಎಂದು ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಸಿಎಂಗೆ ನೀಡಿರುವ ಮನವಿಯಲ್ಲಿ, ಡಾ. ವಿಷ್ಣುವರ್ಧನ್, ನಾಯಕನಟನಾಗಿ 225ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ, ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ಅವರು ನಮ್ಮನ್ನು ಭೌತಿಕವಾಗಿ ಆಗಲಿ 15 ವರ್ಷಗಳು ದಾಟಿದರೂ, ಜನರ ಹೃದಯದಲ್ಲಿ ಅವರು ಹೊಂದಿರುವ ಸ್ಥಾನ ಮಾತ್ರ ಅಚಲವಾಗಿದೆ. ಆದರೆ, ಇದುವರೆಗೆ ಅವರಿಗೆ ಭಾರತ ಸರ್ಕಾರದಿಂದ ಪದ್ಮಶ್ರೀ ಪ್ರಶಸ್ತಿ ಕೂಡ ದೊರಕಿಲ್ಲ. ನಮ್ಮ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯೂ ದೊರಕಿಲ್ಲ.ಈ ವರ್ಷದ ಸೆಪ್ಟೆಂಬರ್ 18 ರಂದು ಅವರ 75ನೇ ಜನ್ಮವಾರ್ಷಿಕೋತ್ಸವವಿದೆ. ಈ ವಿಶೇಷ ಸಂದರ್ಭದಲ್ಲಿ, ಅವರ ಅಪಾರ ಸಾಧನೆಗಳನ್ನು ಗೌರವಿಸಿ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
PublicNext
18/07/2025 10:15 pm