ರಾಯಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಎನ್‌ಕೌಂಟರ್ ಸ್ಥಳದಲ್ಲಿ ಎಕೆ-47 ಹಾಗೂ ಎಸ್‌ಎಲ್‌ಆರ್ ರೈಫಲ್‌ಗಳು, ಅಪಾರ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ.
ಅಬುಜ್‌ಮದ್ ಪ್ರದೇಶ ನಕ್ಸಲರ ಭದ್ರಕೋಟೆಯೆನ್ನಲಾಗಿದೆ. ಗುಪ್ತಚರ ಮಾಹಿತಿ ಆಧಾರದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಗೆ ಮುಂದಾಗಿದ್ದವು. ಅರಣ್ಯದಲ್ಲಿ ನಡೆಯುತ್ತಿರುವ ನಿರಂತರ ಚಟುವಟಿಕೆಗಳ ಮಧ್ಯೆ ನಡೆದ ಈ ಎನ್‌ಕೌಂಟರ್ ನಕ್ಸಲರು ವಿರುದ್ಧದ ಮಹತ್ವದ ಯಶಸ್ಸು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 6ರಂದು ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆದ ಇನ್ನೊಂದು ಎನ್‌ಕೌಂಟರ್‌ನಲ್ಲಿ, ತಲೆಗೆ 45 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ನಕ್ಸಲ್ ನಾಯಕ ಭಾಸ್ಕರ್ ಹತ್ಯೆಗೀಡಾಗಿದ್ದ.
PublicNext
19/07/2025 09:08 am