ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ರ ಅರುಣ್ ರಾಜಕೀಯ ಪ್ರವೇಶ ಬಗ್ಗೆ ಭವಿಷ್ಯ ನುಡಿದ ಕೇಂದ್ರ ಸಚಿವ ವಿ ಸೋಮಣ್ಣ

ಬೆಂಗಳೂರು: ಪುತ್ರನ ಹುಟ್ಟುಹಬ್ಬದ ದಿನವೇ ಮಗನ ರಾಜಕೀಯ ಪ್ರವೇಶದ ಸಂದೇಶ ಕೊಟ್ಟಿದ್ದಾರೆ ಕೇಂದ್ರ ಸಚಿವ ವಿ. ಸೋಮಣ್ಣ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ಪುತ್ರ ಅರುಣ್ ರಾಜಕೀಯ ಪ್ರವೇಶ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಮುಂದಿನ ದಿನಗಳಲ್ಲಿ ಅರುಣ್ ಅವರು ರಾಜಕೀಯ ಪ್ರವೇಶ ಮಾಡ್ತಾರೆ. ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯ ಭವಿಷ್ಯ ಸಿಗಲಿದೆ. ಅವರ ನಡವಳಿಕೆ ಅಷ್ಟು ಚೆನ್ನಾಗಿದೆ. ಅವರ ರಾಜಕೀಯ ಪ್ರವೇಶ ಆಗುತ್ತೆ. ಆದ್ರೆ ಎಲ್ಲಿಂದ ರಾಜಕೀಯ ಪ್ರವೇಶ ಮಾಡ್ತಾರೋ ಗೊತ್ತಿಲ್ಲ.

ಅದನ್ನೆಲ್ಲ ಪಕ್ಷ ಗಮನಿಸುತ್ತೆ. ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳುವ ಮೂಲಕ ತಮ್ಮ ಪುತ್ರನ ರಾಜಕೀಯ ಪ್ರವೇಶಕ್ಕೆ ಮುನ್ನುಡಿ ಬರೆದಿದ್ದಾರೆ.

Edited By : Nagaraj Tulugeri
PublicNext

PublicNext

19/07/2025 03:00 pm

Cinque Terre

31.18 K

Cinque Terre

2

ಸಂಬಂಧಿತ ಸುದ್ದಿ