ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿಐಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಈ ಸಂಖ್ಯೆಗೆ ಸಂಪರ್ಕಿಸಿ

ಬೆಂಗಳೂರು : ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆ ಎಂದು ದೂರು ಬರ್ತಿದೆ.

ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥ ಅಧಿಕಾರಿ/ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ. ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು

ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ರಜಾದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

19/07/2025 10:37 pm

Cinque Terre

13.12 K

Cinque Terre

0

ಸಂಬಂಧಿತ ಸುದ್ದಿ