", "articleSection": "Politics,Cinema,News,Public News", "image": { "@type": "ImageObject", "url": "https://prod.cdn.publicnext.com/s3fs-public/463655-1753005675-manjunath---2025-07-20T153058.542.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "manjunath.lagoti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಧರ್ಮಸ್ಥಳದಲ್ಲಿ ನಡೆದ ವಿಚಿತ್ರ ಮತ್ತು ಆಘಾತಕಾರಿ ಘಟನೆಗಳ ಬಗ್ಗೆ ಮಾಜಿ ಸಂಸದೆ ನಟಿ ರಮ್ಯಾ ತೀವ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತ...Read more" } ", "keywords": "Dharmasthala case, fair investigation demanded, Ramya appeals, former MP Ramya, Dharmasthala controversy, Ramya demands justice, investigation in Dharmasthala case, Ramya seeks fair probe. ", "url": "https://dashboard.publicnext.com/node" }
ಧರ್ಮಸ್ಥಳದಲ್ಲಿ ನಡೆದ ವಿಚಿತ್ರ ಮತ್ತು ಆಘಾತಕಾರಿ ಘಟನೆಗಳ ಬಗ್ಗೆ ಮಾಜಿ ಸಂಸದೆ ನಟಿ ರಮ್ಯಾ ತೀವ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕುರಿತಾಗಿ ನ್ಯಾಯಯುತ ತನಿಖೆ ನಡೆಸಬೇಕೆಂದು ಅವರು ಸರ್ಕಾರದ ಗಮನ ಸೆಳೆದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿರುವ ನಟಿ ರಮ್ಯಾ “ಧರ್ಮಸ್ಥಳದಲ್ಲಿ ನಡೆದಿರುವ ಸಾಮೂಹಿಕ ಅಂತ್ಯಕ್ರಿಯೆ ಹಾಗೂ ಮಹಿಳೆಯರ ನಾಪತ್ತೆ ಕುರಿತು ಕೇಳಿ ನಾನು ಆತಂಕಗೊಳ್ಳಿದ್ದೇನೆ. ಸತ್ಯ ಹೊರಬರಬೇಕು. ನ್ಯಾಯಯುತ ತನಿಖೆ ನಡೆಯಲಿ” ಎಂದು ಹೇಳಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ನಟ ಪ್ರಕಾಶ್ ರಾಜ್ ಕೂಡ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣಕ್ಕೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂಬ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಅಲ್ಲದೇ ಪ್ರಕರಣವನ್ನು ಕವರ್‌ಅಪ್ ಮಾಡಲು ಯತ್ನಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
PublicNext
20/07/2025 03:32 pm